ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ!

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ!

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆ ಹೆಚ್ಚಾಗಿದ್ದು ಇದರಿಂದ ರೈತರೆಲ್ಲಾ ಕಂಗಲಾಗಿದ್ದರು ಆದರೆ ಸ್ವಲ್ಪ ದಿನಗಳು ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗಿತ್ತು. ಆದರೆ ಎರಡು ವಾರದಿಂದ ಏರಿಕೆಯಾಗಿರುವ ತಾಪಮಾನ ಇದರಿಂದ ಸಲ್ಪ ಆತಂಕ ಮೂಡಿದೆ.

ಕರ್ನಾಟಕದಲ್ಲಿ ಇಂದಿನಿಂದ ಹಲವೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ. ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ಮಳೆಯಾಗದೆ ಜನರು ಕಂಗಟ್ಟಿದ್ದಾರೆ. ಆದ್ದರಿಂದ ಈ ತಿಂಗಳಾದರೂ ಮಳೆಯಾದರೆ ಜನರ ಮುಖದಲ್ಲಿ ಮತ್ತು ರೈತರ ಮುಖದಲ್ಲಿ ಸಂತಸ ವ್ಯಕ್ತವಾಗುತ್ತದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ, ದಕ್ಷಿಣ ಒಳನಾಡಿನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರಿನಲ್ಲಿ ನವೆಂಬರ್ 7ರವರೆಗೆ ಮಳೆಯಾಗಲಿದೆ

ಕರಾವಳಿಯ ಹಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ, ಉತ್ತರ ಒಳನಾಡಿನಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

 

ಫ್ರೆಶ್ ನ್ಯೂಸ್

Latest Posts

Featured Videos