ಕರ್ನಾಟಕ ಸೇರಿ ವಿವಿಧಡೆ ಬಾರೀ ಮಳೆ

ಕರ್ನಾಟಕ ಸೇರಿ ವಿವಿಧಡೆ ಬಾರೀ ಮಳೆ

ಬೆಂಗಳೂರು, ಜೂನ್.10, ನ್ಯೂಸ್ ಎಕ್ಸ್ ಪ್ರೆಸ್: ಇಂದಿನಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ
ಜೂನ್ 13ರವರೆಗೆ – ಬೆಂಗಳೂರು, ಮೈಸೂರು, ಹಾಸನ ಸೇರಿ ದಕ್ಷಿಣ ಒಳನಾಡು, ಜೂನ್ 10,11 – ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ  ಕೇರಳಕ್ಕೆ ಪ್ರವೇಶಿಸಿರುವ ಮುಂಗಾರು ಮಳೆ ಆರಂಭದಲ್ಲೇ ಆರ್ಭಟ ತೋರಿದೆ. ಮುನ್ನೆಚ್ಚರಿಕಾ ಕ್ರಮವಾಗಿ 9 ಜಿಲ್ಲೆಗಳಲ್ಲಿ ಕಟ್ಟೆಚ್ಚರ ಹೊರಡಿಸಲಾಗಿದೆ. ಕರ್ನಾಟಕಕ್ಕೂ ಮುಂಗಾರು ಪ್ರವೇಶವಾಗುತ್ತಿದ್ದು, ಮಾನ್ಸೂನ್ ಜೊತೆಗೆ ಚಂಡಮಾರುತದ ಭೀತಿಯೂ ಎದ್ದಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದ ಲಕ್ಷದ್ವೀಪದ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ಕೇರಳ ಮತ್ತು ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಲಕ್ಷದ್ವೀಪಕ್ಕೆ ಹೊಂದಿಕೊಂಡಂತೆ ಅರಬ್ಬಿ ಸಮುದ್ರದ ಆಗ್ನೇಯ ಭಾಗ ಮತ್ತು ಮಧ್ಯ ಪೂರ್ವ ಭಾಗದಲ್ಲಿ ವಾಯುಭಾರ ಕುಸಿತದ ಕೇಂದ್ರವಿದೆ. ಮುಂದಿನ 24 ಗಂಟೆಗಳಲ್ಲಿ ಅದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯೂ ಇದೆ. ಪ್ರತಿ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ ಎರಡು ದಿನಗಳಲ್ಲಿ ಗಾಳಿಯ ವೇಗ 90ರಿಂದ 110 ಕಿ.ಮೀವರೆಗೂ ತಲುಪಬಹುದು. ರಾವಳಿಯಲ್ಲಿ 5 ದಿನಗಳ ಕಾಲ ಮತ್ತು ದಕ್ಷಿಣ ಒಳನಾಡಿನಲ್ಲಿ 2 ದಿನಗಳ ಕಾಲ ಭಾರಿ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದ್ದರಿಂದಾಗಿ ಗುರುವಾರದವರೆಗೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos