ಬಾರಿ ಮಳೆ ಶಾಲಾ-ಕಾಲೇಜುಗಳಿಗೆ ಮತ್ತೆ 2 ದಿನ ರಜೆ

ಬಾರಿ ಮಳೆ ಶಾಲಾ-ಕಾಲೇಜುಗಳಿಗೆ ಮತ್ತೆ 2 ದಿನ ರಜೆ

ಬಾಗಲಕೋಟೆ, ಆ. 8: ರಾಜ್ಯದೆಲ್ಲೆಡೆ ಒಂದುವಾರದಿಂದಲೂ ಮಳೆರಾಯನ ಆರ್ಭಟ ಜೋರಾಗಿಯೇ ಇದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಂತೂ ಜೋರು ಮಳೆಯಿಂದಾಗಿ ನದಿಗಳೆಲ್ಲ ತುಂಬಿ ಹರಿಯುತ್ತಿದೆ. ಅಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿದೆ. ಎಲ್ಲರು ಮಳೆಯಿಂದಾಗಿ ಪರದಾಡುವಂತಾಗಿದೆ. ಹೀಗಾಗಿ ಅಲ್ಲಿನ ಶಾಲಾ- ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು.

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದಾಗಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಯಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಬಾಗಲಕೋಟೆ ಶಾಲೆಗಳಿಗೆ ಮತ್ತೆ ಎರಡು ದಿನ ರಜೆಯನ್ನು ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ತತ್ತರಿಸಿರುವ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೆ ಎರಡು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಬಾಗಲಕೋಟೆ ಡಿ.ಸಿ ಆರ್ ರಾಮಚಂದ್ರನ್ ರಜೆ ಘೋಷಿಸಿ ಆದೇಶ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos