ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ!

ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ!

ಬೆಂಗಳೂರು: ಕರ್ನಾಟಕದಲ್ಲಿ ಮಳೆ ಇಲ್ಲದೆ ಭೀಕರ ಬರಗಾಲ ಎದುರಾದ ಕಾರಣಕ್ಕೆ ರಾಜ್ಯ ಸರ್ಕಾರಕ್ಕೂ ದೊಡ್ಡ ತಲೆನೋವು ಶುರುವಾಗಿದೆ. ಯಾಕಂದ್ರೆ ಪರಿಸ್ಥಿತಿ ಇದೇ ರೀತಿ ಮುಂದುವರಿದು, ಈ ಬರ ಇನ್ನೂ ಹಲವು ತಿಂಗಳು ಮುಂದುವರಿಯುತ್ತೆ ಎಂಬ ಭಯ ಆವರಿಸಿತ್ತು. ಈ ಕಾರಣಕ್ಕೆ ತಕ್ಷಣಕ್ಕೆ ಮಳೆ ಬರಬೇಕು ಅಂತಾ ಹೇಳಿದ್ದರು ತಜ್ಞರು.

ಅದೇ ರೀತಿ ಈಗ ಮಳೆಯ ಆಗಮನ ಆಗಿದೆ. ಅದರಲ್ಲೂ ಕಾವೇರಿ ನದಿಯ ತವರು ಕೊಡಗು ಜಿಲ್ಲೆಯಲ್ಲಿ ಭರ್ಜರಿ ಮಳೆ ಬಂದು, ಭೂಮಿ ಕೆಸರಾಗಿದೆ. ಕಾವೇರಿ ತಾಯಿಯ ಒಡಲಿಗೂ ಭರ್ಜರಿ ನೀರು ಸೇರ್ಪಡೆಯಾಗಿದೆ. ಈ ರೀತಿ ಕರ್ನಾಟಕದ ವಿವಿಧ ಪ್ರದೇಶದಲ್ಲೂ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

ಕರ್ನಾಟಕದಲ್ಲಿ ಅದ್ರಲ್ಲೂ ಬೆಂಗಳೂರಿನಲ್ಲಿ ಸದ್ಯಕ್ಕೆ ಯಾವುದೇ ರೀತಿಯ ಮಳೆಯ ಮನ್ಸೂಚನೆ ಇಲ್ಲ ಎನ್ನಲಾಗಿತ್ತು. ಹೀಗಾಗಿ ಒಣ ಹವೆ ಕಾಟ ಮುಂದುವರಿಯಲಿದೆ ಎನ್ನಲಾಗಿತ್ತು. ಹಾಗೆಯೇ ಮುಂದಿನ 2 ಅಥವಾ 3 ವಾರ ಇದೇ ವಾತಾರಣ ಇರಲಿದೆ ಎನ್ನಲಾಗುತ್ತಿತ್ತು. ದಕ್ಷಿಣ ಒಳನಾಡಿನ ಕೆಲವು ಕಡೆ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ.

ಕರ್ನಾಟಕದ ನೆಲದಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಾಗುವ ಭಯ ಆವರಿಸಿತ್ತು. ಹೀಗಿದ್ದಾಗ ಮಳೆ ಮುನ್ಸೂಚನೆ ಸಿಕ್ಕಿದೆ. ಇನ್ನೇನು ಕೆಲವೇ ದಿನದಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಶುರುವಾಗುವ ನಿರೀಕ್ಷೆ ಇದೆ.

ಫ್ರೆಶ್ ನ್ಯೂಸ್

Latest Posts

Featured Videos