ರಾಜ್ಯದಲ್ಲಿ  ಮಳೆ  ಇಲ್ಲ

 ರಾಜ್ಯದಲ್ಲಿ  ಮಳೆ  ಇಲ್ಲ

ಬೆಂಗಳೂರು, ಜು. 13 : ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲೂ ಮಳೆ ಕಡಿಮೆಯಾಗಲಿದೆ. ಜುಲೈ 19ರವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

ಕಳೆದ ಒಂದೂವರೆ ತಿಂಗಳಲ್ಲಿ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಅಲ್ಲಲ್ಲಿ ಚದುರಿದಂತೆ ತುಂತುರು ಇಲ್ಲವೆ ಸಾಧಾರಣ ಮಳೆಯಾಗುತ್ತಿದೆ. ಇದರಿಂದ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿವೆ ಎಂದು  ಪ್ರಜಾವಾಹಿನಿಗೆ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos