ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ ಕಡ್ಡಾಯ

ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ ಕಡ್ಡಾಯ

ದೇವನಹಳ್ಳಿ, ಆ. 9: ಬರ ಪೀಡಿತ ಬಯಲು ಸೀಮೆ ಪ್ರದೇಶದಲ್ಲಿ ನೀರಿನ ಅಭಾವ ಹೆಚ್ಚು ಇರುರುವುದರಿಂದ ನೀರಿನ ಸಂರಕ್ಷಣೆ ಅತ್ಯವಶ್ಯಕವಾಗಿದೆ. ತಮ್ಮ ಮನೆಗಳ ಮೇಲೆ ಬೀಳುವ ಮಳೆಯ ನೀರನ್ನು ಪೋಲಾಗದಂತೆ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಂಡರೆ ನೀರಿನ ಸಮಸ್ಯೆಗೆ ಪರಿಹಾರ ವಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎಸ್ ಕರೀಗೌಡ ತಿಳಿಸಿದರು.

ನಗರದ ಗಿರಿಯಮ್ಮ ವೃತ್ತದಲ್ಲಿರುವ ಬಿ.ಆರ್ ಅಂಬೇಡ್ಕರ್ ಭವನದ ಹತ್ತಿರದಿಂದ ಹಳೇ ಬಸ್ಸ್ ನಿಲ್ದಾಣ ಸೇರಿದಂತೆ ನಗರದ ರಾಜ ಬೀದಿಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಬೆಂಗಳೂರು ಕೇಂದ್ರಿಯ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಘಟಕದ ವತಿಯಿಂದ `ಜಲಶಕ್ತಿ ಅಭಿಯಾನ’ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನೀರಿನ ಸಮಸ್ಯೆ ನೀಗಿಸಲು ಪ್ರತಿಯೊಂದು ಕೈಗಾರಿಕಾ ಕಟ್ಟಡಗಳಲ್ಲಿ ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಬೇಕು. ಜಲಶಕ್ತಿ ಹಾಗೂ ಜಲಾಮೃತ ಯೋಜನೆಯಡಿ ಜಿಲ್ಲೆಯಾದ್ಯಂತ ಚೆಕ್ ಡ್ಯಾಂ ನಿರ್ಮಾಣ, ಕೆರೆ-ಕಲ್ಯಾಣಿಗಳ ಅಭಿವೃದ್ಧಿ, ಕೃಷಿಹೊಂಡ ನಿರ್ಮಾಣ ಹಾಗೂ ಗಿಡಗಳನ್ನು ನೆಡುವ ಮೂಲಕ ಜಲ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅಧಿಕಾರಿಗಳು ಮೊದಲು ತಮ್ಮ ಮನೆಗಳಲ್ಲಿ ಮಳೆ ಕೊಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಬೋರ್ ವೆಲ್ ಹತ್ತಿರ ಇಂಗು ಗುಂಡಿ ಮತ್ತು ಮಳೆ ಕೊಯ್ಲು , ಚೆಕ್ ಟ್ಯಾಂಗಳು ಹೆಚ್ಚು ಆಗಬೆಕಾಗಿದೆ. ಇನ್ನೊಂದು ತಿಂಗಳಿನೊಳಗಾಗಿ ಎಲ್ಲಾ ಅಧಿಕಾರಿಗಳು ಮಳೆ ಕೊಯ್ಲು ಪದ್ದತಿ ಮಾಡಿರುವ ಫೋಟೋ ಸಮೇತವಾಗಿ ಮಾಹಿತಿ ನೀಡಬೇಕೆಂದು ತಿಳಿಸಬೇಕಾಗಿದೆ. ಬರದಿಂದ ತತ್ತರಿಸಿ ಹೋಗಿರುವ ಜಿಲ್ಲೆಯಲ್ಲಿ ಮಳೆಯ ನೀರನ್ನು ಸಂರಕ್ಷಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos