ಬೆಳಗಾವಿ, ನ. 07: ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದ್ದು, ಬೆಳಗಾವಿ ಜಿಲ್ಲೆಯ ಬದಾಮಿ, ಅಥಣಿ, ಹಾಗೂ ಸವದತ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಯಲ್ಲಮ್ಮನ ದೇವಸ್ಥಾನಕ್ಕೆ ನೀರು ನುಗ್ಗಿ ಭಕ್ತರು ಪರದಾಡುವಂತಾಗಿದೆ. ಇನ್ನು ಸಿದ್ದರಾಮಯ್ಯ ಕ್ಷೇತ್ರದ ಬದಾಮಿಯಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದ ಕೆರೆ ಮೇಣ ಬಸದಿ, ಕಳ್ಳಿಪೇಟೆ ಊಣಿಯಲ್ಲಿ ನೀರು ಹರಿಯುತ್ತಿದೆ.
ಕೆಲ ತಿಂಗಳ ಹಿಂದೆ ಭಾರೀ ಮಳೆಗೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು. ಇದೀಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.