ರಾಜ್ಯದಲ್ಲಿ 3 ದಿನಗಳ ಕಾಲ ಮಳೆಯ ಮುನ್ಸೂಚನೆ

ರಾಜ್ಯದಲ್ಲಿ 3 ದಿನಗಳ ಕಾಲ ಮಳೆಯ ಮುನ್ಸೂಚನೆ

ಬೆಂಗಳೂರು:ರಣಭೀಕರ ಬಿಸಿಲಿನಿಂದ ಹೈರಾಣಾಗಿದ್ದ ಕರ್ನಾಟಕದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ರಾಜ್ಯದಲ್ಲಿ ಇಂದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ನಡುವೆ ಜನರಿಗೆ ಮಳೆಯ ಸಿಂಚನೆ ದೊರೆತಿದೆ ರಾಜ್ಯದಲ್ಲಿ ಕಳೆದ ಮುಂಗಾರು ಕೈಕೊಟ್ಟಿದ್ದಕ್ಕೆ ಬರದ ಪರಿಸ್ಥಿತಿ ಆವರಿಸಿದ್ದು ಈ ನಡುಗೆ ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಲವಾರು ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos