ರಾಜ್ಯದಲ್ಲಿ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮಳೆಗಾಲ ಆರಂಭವಾಗಿದ್ದರು ಸಹ ಅಂದುಕೊಂಡಷ್ಟು ರಾಜ್ಯದಲ್ಲಿ ಸಹ ಮಳೆ ಆಗಿರಲಿಲ್ಲ ಇದರಿಂದ ನೀರಿಗೆ ರಾಜ್ಯದಲ್ಲಿ ಬರ ಬಂದಿತ್ತು ಆದರೆ ಈಗ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದೆಲ್ಲಡೆ ಸ್ವಲ್ಪ ಮಟ್ಟಿಗೆ ಮಳೆ ಆರಂಭವಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಬಹುತೇಕ ಕಡೆಗಳಲ್ಲಿ ಬಾರೀ ಮಳೆಯಾಗಲಿದೆ.
ಕನ್ನಡ ಜಿಲ್ಲೆಯಲ್ಲು ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ದಕ್ಷಿಣ ಕನ್ನಡ, ಉತ್ತರಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ.
ಮಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮಳೆ ಕಾಣಿಸಿದ್ದು, ಗ್ರಾಮೀಣ ಭಾಗಗಳಲ್ಲಿ ಮಧ್ಯಾಹ್ನ ಬಳಿಕ ಉತ್ತಮ ಮಳೆಯಾಗಿದೆ. ಮಂಗಳೂರಿನಲ್ಲೂ ಸಂಜೆ ವೇಳೆಗೆ ಸಾಧಾರಣ ಧಾರಾಕಾರ ಮಳೆಯಾಗಿದೆ.
ಮಂಗಳೂರಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಇದ್ದು, ಗ್ರಾಮೀಣ ಭಾಗದಲ್ಲಿ ಬೆಳಗ್ಗೆ ಮಾತ್ರ ಮೋಡ, ಬಿಸಿಲು ಕಂಡುಬಂದಿತ್ತು. ಬೆಳ್ತಂಗಡಿ, ಚಾರ್ಮಾಡಿ, ಧರ್ಮಸ್ಥಳ, ಪುತ್ತೂರು, ಸುಳ್ಯಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ 2 ದಿನ ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಫ್ರೆಶ್ ನ್ಯೂಸ್

Latest Posts

Featured Videos