ರಾಜ್ಯದಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ ಇಂದು ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೆಡೆ ಇಂದು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಹಾಸನ, ಕೊಡಗು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಇಂದು ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಭಾರಿ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿರುವ ಜನರು ಕಂಚ ನಿರಾಳರಾಗಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರಿನ ಹಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಫ್ರೆಶ್ ನ್ಯೂಸ್

Latest Posts

Featured Videos