ಚಿಕ್ಕಮಗಳೂರು, ಅ. 5 : ಕೃಷಿ ಭೂಮಿಯನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಜಿಲ್ಲೆಯ ಇಬ್ಬರು ರೈತರ ಮನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಸಾಂತ್ವನ ಹೇಳಿದರು.
ಮೃತ ರೈತ ಚಂದ್ರೇಗೌಡ ಹಾಗೂ ಚನ್ನಪ್ಪಗೌಡ ಮನೆಗೆ ಭೇಟಿ ನೀಡಿದ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಇಬ್ಬರೂ ರೈತರ ಕುಟುಂಬದವರಿಗೆ ತಲಾ 50 ಸಾವಿರ ರೂಪಾಯಿ ವೈಯಕ್ತಿಕ ಪರಿಹಾರ ಧನವನ್ನು ಸಿದ್ದರಾಮಯ್ಯ ಹಸ್ತಾಂತರಿಸಿದರು.