ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಧಾರವಾಡ, ಜ. 27: ಬೆಳೆದ ಬೆಳೆಗೆ ಸರಿಯಾದ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ನೇತೃತ್ವದಲ್ಲಿ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಅನ್ಯಾಯ ಮಾಡುತ್ತಿವೆ ಸರಿಯಾದ ಬೆಂಬಲ ಬೆಲೆ ನೀಡಬೇಕು ರೈತನ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು. ಈಗಾಗಲೇ ಹೆಸರು, ಹತ್ತಿ, ಉದ್ದು, ಗೋವಿನ ಜೋಳ, ಗೋಧಿ, ಕಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಕೇಂದ್ರ ಸರ್ಕಾರ ನೀಡುವ ಬೆಂಬಲ ಬೆಲೆ ಯೋಗ್ಯವಲ್ಲ, ಇನ್ನೂ ಹೆಚ್ಚಿನ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಈ ಕೂಡಲೆ ಬೆಳೆಗಳಿಗೆ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಲ್‌ಗೆ ಬೆಂಬಲ ಬೆಲೆ ಘೋಷಿಸಿ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು ಮತ್ತು ರೈತರು ಬೆಳೆದ ಬೆಳೆಯಲ್ಲಿ ಪ್ರಮಾಣದಲ್ಲಿ ಬಂದರೂ ಸರ್ಕಾರವು ಖರೀದಿಸಬೇಕು, ರೈತರು ಬೆಳೆದ ಎಲ್ಲ ಧವಸ – ದಾನ್ಯಗಳಿಗೆ ಮಿತಿಯನ್ನು ಹಾಕಬಾರದು ಮತ್ತು ರೈತರು ಬೆಳೆದ ಎಲ್ಲಬೆಳೆಗಳನ್ನು ಸರ್ಕಾರವೇ ಖರೀದಿಸಬೇಕು ಎಂದು ರೈತರು ಇಂದಿನಿಂದ ಅಹೋರಾತ್ರಿ  ಧರಣಿ ಕೂತು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ ಭರವಸೆ ನೀಡುವ ವರೆಗೆ ಧರಣಿ ಸತ್ಯಾಗ್ರಹ ಹಿಂಪಡೆಯುವುದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos