ರಾಜ್ಯದ ವಿವಿದಢೆ ಭಾರೀ ಮಳೆ

ರಾಜ್ಯದ ವಿವಿದಢೆ ಭಾರೀ ಮಳೆ

ಬೆಂಗಳೂರು, ಜು. 12 : ರಾಜ್ಯದ ಕರಾವಳಿ, ಮಲೆನಾಡು ಹಾಗೂ ಬೆಳಗಾವಿ ಜಿಲ್ಲೆಯ ಕೆಲ ಭಾಗಗಳಲ್ಲಿ ಗುರುವಾರವೂ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. 41 ಗ್ರಾಮ ಮತ್ತು ಎರಡು ದ್ವೀಪಗಳು ಸಂಪರ್ಕ ಕಡಿದುಕೊಂಡಿವೆ. ಕರಾವಳಿ, ಮಲೆನಾಡು ಭಾಗದಲ್ಲಿ ಎರಡ್ಮೂರು ದಿನ ಭಾರೀ ಮಳೆ ಸಾಧ್ಯತೆ ಇದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ 40 – 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಅರಬ್ಬಿ ಸಮುದ್ರದಲ್ಲಿ ನಾಲ್ಕೈದು 5 ಅಡಿ ಎತ್ತರಕ್ಕೆ ಅಲೆಗಳು ಏಳುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರ ಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos