ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಕೇಶವ್ ಮಹಾರಾಜ್ ಎಂಟ್ರಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಕೇಶವ್ ಮಹಾರಾಜ್ ಎಂಟ್ರಿ

ಬೆಂಗಳೂರು: ಐಪಿಎಲ್ ಭಾರತದ ಅತ್ಯಂತ ದೊಡ್ಡ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಿದ್ದು ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ಆರಂಭವಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಒಟ್ಟು 10 ತಂಡಗಳಿದ್ದು ಈಗಾಗಲೇ ಎಲ್ಲಾ ತಂಡಗಳು ಒಂದೊಂದು ಪಂದ್ಯಗಳಾಡಿದ್ದು.  ನೆನ್ನೆ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿತ್ತು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 12 ರನ್ಗಳಿಂದ ಗೆದ್ದುಬೀಗಿದೆ. ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಕೇಶವ್ ಮಹಾರಾಜ್ ಎಂಟ್ರಿ ಆಗಿದ್ದಾರೆ.

17ನೇ ಆವೃತ್ತಿಯ ಐಪಿಎಲ್ ಆರಂಭವಾಗಿ ವಾರಕ್ಕೂ ಹೆಚ್ಚು ಸಮಯ ಕಳೆದಿದೆ. ಈಗಾಗಲೇ ಎಲ್ಲಾ ತಂಡಗಳು ತಲಾ ಒಂದೊಂದು ಪಂದ್ಯವನ್ನಾಡಿದ್ದು, ಇದೀಗ ಎರಡನೇ ಪಂದ್ಯಗಳನ್ನು ಆಡುತ್ತಿವೆ. ಈ ನಡುವೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದಕ್ಷಿಣ ಆಫ್ರಿಕಾ ಆಟಗಾರನ ಎಂಟ್ರಿಯಾಗಿದೆ.

ವಾಸ್ತವವಾಗಿ ಗಾಯದಿಂದಾಗಿ ಈ ಸೀಸನ್​ನಿಂದ ಹೊರಗುಳಿದಿದ್ದ ಪ್ರಸಿದ್ಧ್ ಕೃಷ್ಣ ಅವರ ಬದಲಿಯಾಗಿ ದಕ್ಷಿಣ ಆಫ್ರಿಕಾದ ಸ್ಟಾರ್ ಬೌಲರ್ ಕೇಶವ್ ಮಹಾರಾಜ್ ಅವರನ್ನು ರಾಜಸ್ಥಾನ್ ರಾಯಲ್ಸ್ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ.

ಮೂಲ ಬೆಲೆ 50 ಲಕ್ಷ ರೂಗಳಿಗೆ ತಂಡ ಸೇರಿಕೊಂಡಿರುವ ಕೇಶವ್ ಮಹಾರಾಜ್ ಇನ್ನು ಮುಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ಪರ ಕಣಕ್ಕಿಳಿಯಲ್ಲಿದ್ದಾರೆ. ಎಡಗೈ ಸ್ಪಿನ್ ಬೌಲಿಂಗ್ ಮಾಡುವ ಮಹಾರಾಜ್, ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ಭಾರತೀಯ ಪಿಚ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ವಿಶ್ವಕಪ್​ನಲ್ಲಿ ಆಡಿದ 10 ಪಂದ್ಯಗಳಲ್ಲಿ ಕೇಶವ್ 15 ವಿಕೆಟ್‌ಗಳನ್ನು ಪಡೆದಿದ್ದರು. ಅಲ್ಲದೆ ಈ ವರ್ಷದ ಆರಂಭದಲ್ಲಿ ನಡೆದ SA20 ನಲ್ಲಿ, ಮಹಾರಾಜ್, ಸೂಪರ್ ಜೈಂಟ್ಸ್ ಫ್ರಾಂಚೈಸ್‌ ಪರ ಕಣಕ್ಕಿಳಿದಿದ್ದರು. ಅಲ್ಲಿ ಆಡಿದ್ದ 13 ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದರು.

 

 

ಫ್ರೆಶ್ ನ್ಯೂಸ್

Latest Posts

Featured Videos