ಸೂಪರ್‌ ಸ್ಟಾರ್ ರಜನಿಕಾಂತ್‌ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

ಸೂಪರ್‌ ಸ್ಟಾರ್ ರಜನಿಕಾಂತ್‌ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

ಬೆಂಗಳೂರು: ರಜನಿಕಾಂತ್ ನಟನೆಯ 171ನೇ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಅವರೇ ತಮ್ಮ ಸೋಷಿಯಲ್ ಮೀಡಿಯಾದ ಪೇಜ್ ನಲ್ಲಿ ಫಸ್ಟ್ ಲುಕ್ ಅನ್ನು ಪೋಸ್ಟ್ ಮಾಡಿದ್ದಾರೆ. ಬಂಗಾರದ ವಾಚ್ ಅನ್ನು ಬೇಡಿ ಮಾಡಿಕೊಂಡು ಸಖತ್ ಲುಕ್ ನಲ್ಲಿ ರಜನಿ ಕಾಣಿಸಿಕೊಂಡಿದ್ದಾರೆ. ತಲೈವಾ ಅವತಾರ ಕಂಡು ಫ್ಯಾನ್ಸ್ ಕುಣಿದಿದ್ಧಾರೆ.

ಲೋಕೇಶ್‌ ಕನಕರಾಜ್‌ ನಿನ್ನೆ ಸೋಶಿಯಲ್‌ ಮಿಡಿಯಾದಲ್ಲಿ ‘ತಲೈವರ್ 171’ ಚಿತ್ರದ ಹೊಸ ಪೋಸ್ಟರ್ ಅನ್ನು ಹಂಚಿಕೊಳ್ಳುವುದರ ಜೊತೆಗೆ ಈ ಸಿನಿಮಾದ ಟೈಟಲ್‌ ಟೀಸರ್‌ ಏಪ್ರಿಲ್ 22, 2024 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ನಟ ರಜಿನಿಕಾಂತ್‌ ಒರಟಾಗಿ ರಗಡ್‌ ಅವತಾರದಲ್ಲಿ ಕಾಣಿಸಿಕೊಳ್ಳುವುದರ ಜೊತೆಗೆ ಕೈಗೆ ಚಿನ್ನದ ಕೈಗಡಿಯಾರ ಬೇಡಿ ತರಹ ಹಾಕಿಕೊಂಡಿದ್ದರು.

ಸಂದರ್ಶನವೊಂದರಲ್ಲಿ ಮಾತನಾಡಿದ ಲೋಕೇಶ್‌ ಕನಕರಾಜ್‌ ಸದ್ಯಕ್ಕೆ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ. ಈ ನಿರ್ದೇಶಕ “ಜೂನ್‌ನಲ್ಲಿ ಸಿನಿಮಾ ತೆರೆಗೆ ಬರಲಿದೆ. ಇಡೀ ಪ್ರಕ್ರಿಯೆಯು ಸುಮಾರು ಒಂದರಿಂದ ಒಂದೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ‘ತಲೈವರ್ 171’ ಮುಗಿದ ಒಂದು ತಿಂಗಳ ನಂತರ ನಾವು ಕಾರ್ತಿ ಅವರೊಂದಿಗೆ ‘ಕೈತಿ 2’ ಪ್ರಾರಂಭಿಸುತ್ತೇವೆ. ಆದ್ದರಿಂದ, ಕೆಲಸ ನಡೆಯುತ್ತಿದೆ.” ಎಂದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos