ಇಂದು ರಾಜ್ಯಸಭಾ ಚುನಾವಣೆ ಮತದಾನ ಆರಂಭ

ಇಂದು ರಾಜ್ಯಸಭಾ ಚುನಾವಣೆ ಮತದಾನ ಆರಂಭ

ಬೆಂಗಳೂರು: ರಾಜ್ಯಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು ಕಾಂಗ್ರೆಸ್ ಶಾಸಕರನ್ನು ತಮ್ಮ ಅಭ್ಯರ್ಥಿ ಪರ ಮತ ಹಾಕಿಸಲೆಂದು ಬಿಜೆಪಿ ಜೆಡಿಎಸ್ ನಾಯಕರು ಕಸರತ್ತು ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಜ್ಯ ಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ವಿಧಾನಸೌಧದಲ್ಲಿ ಇಂದು ಬೆಳಗ್ಗೆ 9 ರಿಂದ ಆರಂಭವಾಗಿರುವ ಮತದಾನ ಸಂಜೆ 4 ಗಂಟೆ ವರೆಗೆ ನಡೆಯಲಿದೆ. ರಾಜ್ಯಸಭೆ ಚುನಾವಣೆಗಾಗಿನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಹೀಗಾಗಿ ರಾಜ್ಯಸಭೆ ರಣಕಣ ರಂಗೇರಿದ್ದು, ನಂಬರ್ ಗೇಮ್ ಕಸರತ್ತು ಶುರುವಾಗಿದೆ.

ಇನ್ನು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಅಜಯ್ ಮಖೇನ್, ಜೆಸಿ ಚಂದ್ರಶೇಖರ್, ಡಾ ಸೈಯದ್ ನಾಸಿರ್ ಕಣಕಿಳಿದಿದ್ದಾರೆ ಬಿಜೆಪಿಯಿಂದ ನಾರಾಯಣ ಬಾಂಡಗೆ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕಿಳಿದಿದ್ದಾರೆ ಸಂಜೆ ವೇಳೆಗೆ ಫಲಿತಾಂಶ ಹೊರಬೀಳಲಿದೆ.

ಫ್ರೆಶ್ ನ್ಯೂಸ್

Latest Posts

Featured Videos