ಮೈಸೂರು, ಮಾ.12, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಕನಿಷ್ಠ ಪಕ್ಷ 2 ಕ್ಷೇತ್ರಗಳಲ್ಲಾದರೂ ನಾವು ಜಯಗಳಿಸಬೇಕು. ಕಾರ್ಯಕರ್ತರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಶಾಸಕ ಎನ್.ಮಹೇಶ್ ತಿಳಿಸಿದರು.
ಮೈಸೂರಿನಲ್ಲಿ ನಡೆದ ವಿಭಾಗ ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸಿ.ಎಸ್.ದ್ವಾರಕಾನಾಥ್ ಅವರು ಬಹುಜನ ಸಮಾಜ ಪಕ್ಷದಿಂದ ಸ್ಪರ್ಧಿಸಲಿದ್ದು, ಆ ಭಾಗದಲ್ಲಿ ಪಕ್ಷದ ವರಿಷ್ಠರಾದ ಮಾಯಾವತಿ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.