ಬಳ್ಳಾರಿಯಲ್ಲಿ ರಾಕಿಭಾಯ್ ಹವಾ

ಬಳ್ಳಾರಿಯಲ್ಲಿ ರಾಕಿಭಾಯ್ ಹವಾ

 ಬಳ್ಳಾರಿ, ಡಿ. 27: ಜಿಲ್ಲೆಯ ಸಂಡೂರು ತಾಲೂಕಿನ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ ‘ಕೆಜಿಎಫ್ ಭಾಗ-2’ ಚಿತ್ರೀಕರಣ ಭರದಿಂದ ಸಾಗಿದೆ. ಇಂದು ನಟ ಯಶ್ ಬಳ್ಳಾರಿಗೆ ಆಗಮಿಸಿದ್ದು, ಇಂದಿನಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ಜಿಂದಾಲ್ ಏರ್‌ಪೋರ್ಟ್‌ಗೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಯಶ್ ಅವರನ್ನು ನೋಡಲು ಮುಗಿಬಿದ್ದಿದ್ದರು. ಯಶ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಅಲ್ಲಿಂದ ನೇರವಾಗಿ ಶೂಟಿಂಗ್ ಸ್ಥಳಕ್ಕೆ ತೆರಳಿ, ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಇಂದಿನಿಂದ ಸುಮಾರು 15 ದಿನಗಳ ಕಾಲ ಸಂಡೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಈಗಾಗಲೇ ನಾಲ್ಕು ದಿನಗಳ ಹಿಂದೆಯೇ ‘ಕೆಜಿಎಫ್ -2’ ತಂಡ ಸಂಡೂರಿನ ತುಂಗಾ ಮೈನ್ಸ್ ಕಂಪನಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದಾರೆ. ಇಂದಿನಿಂದ ಯಶ್ ಅವರು ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ತುಂಗಾ ಮೈನ್ಸ್ ಕಂಪನಿಯಲ್ಲಿ ಅದ್ಧೂರಿ ಸೆಟ್ ಹಾಕಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos