ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದ ನಟ ರಕ್ಷಿತ್ ಶೆಟ್ಟಿ

ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದ ನಟ ರಕ್ಷಿತ್ ಶೆಟ್ಟಿ

ಉಡುಪಿ: ಲೋಕಸಭೆ ಚುನಾವಣೆ 2024ರ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಸಾಮಾನ್ಯ ಜನರಂತೆ ಸರತಿ ಸಾಲಿನಲ್ಲಿ ನಿಂತು ಸಿನಿ ತಾರೆಯರು ಮತದಾನ ಮಾಡುತ್ತಿದ್ದಾರೆ. ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.

ಬೆಂಗಳೂರಿನಲ್ಲಿದ್ದ ನಟ ರಕ್ಷಿತ್ ಶೆಟ್ಟಿ ಮತದಾನಕ್ಕಾಗಿ ಉಡುಪಿಯ ಕುಕ್ಕಿಕಟ್ಟೆಗೆ ಬಂದು ತಂದೆ ಶ್ರೀಧರ್ ಶೆಟ್ಟಿ, ತಾಯಿ ರಂಜನಿ ಶೆಟ್ಟಿ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಅರಿವು ಮೂಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos