ಹುಟ್ಟು ಹಬ್ಬದಂದೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ರಾಮ್‌ ಚರಣ್

ಹುಟ್ಟು ಹಬ್ಬದಂದೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ರಾಮ್‌ ಚರಣ್

ಬೆಂಗಳೂರು: ಮೆಗಾ ಪಾವರ್ ಸ್ಟಾರ್ ರಾಮ್ ಚರಣ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪೂರಿ ಜಗನ್ನಾಥ್ ನಿರ್ದೇಶನದ ಚಿರತ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು ಈ ಚಿತ್ರ ಬ್ಲಾಕ್ ಆಫೀಸ್ ನಲ್ಲಿ ಧೂಳೆಬ್ಬಿಸುವುದರ ಮೂಲಕ ಟಾಲಿವುಡ್ ನಲ್ಲಿ ಹೊಸ ಅಧ್ಯಾಯ ಬರೆಯಿತು.

ಮಗಧೀರ ಮೂಲಕ ರಾಮಚರಣ್ ಸ್ಟಾರ್ ನಟರಾಗಿ ಹೊರಹೊಮ್ಮಿದರು. ರಾಮ್ ಚರಣ್ ಇತ್ತೀಚಿಗೆ ಗೇಮ್ ಚೇಂಜಸ್ ಸಿನಿಮಾದಲ್ಲಿ ಅಭಿನಯಿಸಿದ್ದಾರೆ ಗೇಮ್ ಚೇಂಜಸ್ ಮಾಡಿದ್ದಾರೆ.

ರಾಮ್ ಚರಣ್ ಅವರು ‘ಗೇಮ್ ಚೇಂಜರ್’ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಬಿಟ್ಟರೆ ಯಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ‘ಗೇಮ್ ಚೇಂಜರ್’ಸಿನಿಮಾದ ಸಾಂಗ್ ರಿಲೀಸ್ ಆಗಿದೆ. ಇಂದು ರಾಮ್ ಚರಣ್ ಅವರ ಬರ್ತ್​ಡೇ. ಆ ಪ್ರಯುಕ್ತ ತಂಡದವರು ಹಾಡನ್ನು ರಿಲೀಸ್ ಮಾಡಿದ್ದಾರೆ. ಈ ಹಾಡಿಗೆ ‘ಜರಗಂಡಿ..’ ಎಂದು ಟೈಟಲ್ ಇಡಲಾಗಿದೆ.

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ಸೆಟ್ಟೇರಿ ಬಹಳ ಸಮಯ ಕಳೆದಿದೆ. ಆದಾಗ್ಯೂ ಇನ್ನೂ ಸಿನಿಮಾದ ಕೆಲಸ ಮುಗಿದಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇಷ್ಟು ದಿನ ಸಿನಿಮಾ ಬಗ್ಗೆ ಅಪ್​ಡೇಟ್ ಸಿಗದೆ ಫ್ಯಾನ್ಸ್ ಸಿಕ್ಕಾಪಟ್ಟೆ ತಲೆಬಿಸಿ ಮಾಡಿಕೊಂಡಿದ್ದರು. ಆದರೆ, ಈಗ ಸಾಂಗ್ ರಿಲೀಸ್ ಆಗಿರುವುದರಿಂದ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos