ಕೇಂದ್ರದ ಸಚಿವರಿಗೆ ರಾಜ್ಯಕ್ಕೆ ಬರಲು ಯಾವುದೇ ನೈತಿಕತೆ ಇಲ್ಲ ರಾಮಲಿಂಗರೆಡ್ಡಿ

ಕೇಂದ್ರದ ಸಚಿವರಿಗೆ ರಾಜ್ಯಕ್ಕೆ ಬರಲು ಯಾವುದೇ ನೈತಿಕತೆ ಇಲ್ಲ ರಾಮಲಿಂಗರೆಡ್ಡಿ

ಬೆಂಗಳೂರು: ಬರಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಆಗಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರೆ ಹಿರಿಯ ಕಾಂಗ್ರೆಸ್ ಮುಖಂಡರು ಮತ್ತು ಸಚಿವರು ಇಂದು ವಿಧಾನಸೌಧ ಮುಂಭಾಗ ಇರುವ ಗಾಂಧಿ ಪ್ರತಿಮೆಯ ಎದುರು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಡೆಸಿದ್ದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಮಲಿಂಗಾರೆಡ್ಡಿ ಮಾತನಾಡಿದವರು, ರಾಜ್ಯಕ್ಕೆ ನ್ಯಾಯಯುತವಾಗಿ ಸೇರಬೇಕಾದ ತೆರಿಗೆ ಹಣ ಮತ್ತು ಅನುದಾನದಲ್ಲಿ ತೀವ್ರ ಮೋಸ ಮಾಡಿದ್ದಾರೆ.

ಸುಮಾರು ಎಂಟು ತಿಂಗಳ ಹಿಂದೆ ಬರ ಅಧ್ಯಯನದ ವರದಿಯನ್ನು ನೀಡಿದ್ದರು ಸಹ ಈವರೆಗೆ ಯಾವುದೇ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಸುಪ್ರೀಂ ಕೋರ್ಟ್ ಸಹ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿದೆ.

ಪಾರಂಪರಿಕವಾಗಿ ಬರ ಪರಿಹಾರವನ್ನು ಸಮೀಕ್ಷೆ ನಡೆಸಿ ಕೆಲವೇ ದಿನಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆದರೆ ಮೋದಿ ಸರ್ಕಾರ ರಾಜ್ಯದಿಂದ ಕೃಷಿ ಸಚಿವರು ಮತ್ತು ಮುಖ್ಯಮಂತ್ರಿಗಳು ಅನುದಾನವನ್ನು ಕೇಳಲು ಹೋದರು ಅವರಿಗೆ ಸಮಯವನ್ನು ಕೊಡದೆ, ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಸುಳ್ಳು ಭರವಸೆಯನ್ನು ಕೊಟ್ಟು ಕಳಿಸುತ್ತಿದ್ದಾರೆ. ಇದು ಬಿಜೆಪಿ ಸರ್ಕಾರಕ್ಕೆ ಮತ್ತು ಮೋದಿಯವರಿಗೆ ರಾಜ್ಯದ ರೈತರ ಮೇಲೆ ಮತ್ತು ರಾಜ್ಯದ ಜನತೆ ಮೇಲೆ ಇರುವ ವಿಶ್ವಾಸ ಮತ್ತು ಪ್ರೀತಿ ಎಂದು ರಾಮಲಿಂಗ ರೆಡ್ಡಿ ಗುಡುಗಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos