ಕುಟುಂಬ ಸಮೇತರಾಗಿ ಮತ ಚಲಾಯಿಸಿದ ಸಚಿವ ರಾಮಲಿಂಗಾ ರೆಡ್ಡಿ

ಕುಟುಂಬ ಸಮೇತರಾಗಿ ಮತ ಚಲಾಯಿಸಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಲೋಕಸಭೆ ಚುನಾವಣೆ 2024ರ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ರಾಜ್ಯದಲ್ಲಿ ಬೆಳಿಗ್ಗೆಯಿಂದಲೇ ಮತದಾರರು ಭರ್ಜರಿ ರೆಸ್ಪಾನ್ಸ್ ಕೊಟ್ಟಿದಾರೆ. ಜನಸಾಮಾನ್ಯರು, ಶಾಸಕರು, ಸಚಿವರ ಹಾದಿಯಾಗಿ, ಸಿನಿಮಾ ನಟರು ಕೂಡ ಸರತಿ ಸಾಲಲ್ಲಿ ನಿಂತು ಮತ ಚಲಾವಣೆಗೆ ಮುಂದಾಗಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಚಿವ ರಾಮಲಿಂಗಾ ರೆಡ್ಡಿ, ಪುತ್ರಿ ಹಾಗೂ ಅಭ್ಯರ್ಥಿ ಸೌಮ್ಯ ರೆಡ್ಡಿ ಹಾಗೂ ಇಡೀ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತಚಲಾಯಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos