ರಾಮನಗರ ಬಿಜೆಪಿಯಿಂದ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ

  • In State
  • December 19, 2018
  • 223 Views
ರಾಮನಗರ ಬಿಜೆಪಿಯಿಂದ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ

ರಾಮನಗರ: ರೆಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಕೇಂದ್ರ ಸರ್ಕಾರ ಹಗರಣ ನಡೆಸಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ವಿರುದ್ಧ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಐಜೂರು ವೃತ್ತದಲ್ಲಿನ ಬೆಂಗಳೂರ – ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ ನಡೆಸಿ ದೇಶದ ಕ್ಷಮೆಯಾಚಿಸುವಂತೆ ಬಿಜೆಪಿ ಮುಖಂಡರು ಒತ್ತಾಯಿಸಿದರು.

ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಸುಪ್ರೀಂ ಕೋರ್ಟ್ನಿಂದ ತೀರ್ಪು ಪ್ರಕಟವಾಗಿದೆ. ಆದರೆ ಈ ಬಗ್ಗೆ ಆರೋಪ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಳ್ಳಿನ ಸರದಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos