ಎಲ್ಲರೂ ಒಟ್ಟಾಗಿ ಸೇರಿದರೆ ಮಾತ್ರ ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಬಹುದು: ರಮೇಶ್ ಅರವಿಂದ್

ಎಲ್ಲರೂ ಒಟ್ಟಾಗಿ ಸೇರಿದರೆ ಮಾತ್ರ ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಬಹುದು: ರಮೇಶ್ ಅರವಿಂದ್

ಬೆಂಗಳೂರು: ರಾಜ್ಯ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ತಮ್ಮ ಮತಗಟ್ಟೆಗಳ ಬಗ್ಗೆ ಅರಿವು ಮೂಡಿಸಲು ‘ನಮ್ಮ ನಡೆ ಮತಗಟ್ಟೆಯ ಕಡೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ವಿದ್ಯಾರ್ಥಿಗಳನ್ನು  ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಯುವ ಮತದಾರು  “ನಮ್ಮ ನಡೆ ಮತಗಟ್ಟೆಯ ಕಡೆ” ದ್ಯೇಯದೊಂದಿಗೆ ಉತ್ಸಾಹದಿಂದ ಮತ ಚಲಾಯಿಸಬೇಕೆಂದು

ಭಾರತ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಜ್ಞಾನಜ್ಯೋತಿ ಸಭಾಂಗದಲ್ಲಿ ಇಂದು ನಡೆದ “ನಮ್ಮ ನಡೆ ಮತಗಟ್ಟೆಯ ಕಡೆ” ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಪ್ರತಿ ಬಾರಿಯ ಚುನಾವಣೆಯಲ್ಲೂ ಕಡಿಮೆ ಮತದಾನ ನಡೆಯುತ್ತದೆ. ಈ ಬಾರಿ ಹೆಚ್ಚು ಮತದಾನವಾಗಬೇಕು. ಎಲ್ಲರೂ ಒಟ್ಟಾಗಿ ಇತರರನ್ನೂ ಪ್ರೇರೇಪಿಸಿ ತಪ್ಪದೆ ಮತ ಚಲಾಯಿಸೇಕೆಂದು ತಿಳಿಸಿದರು.

ನಿಮ್ಮ ಅಭ್ಯರ್ಥಿಯನ್ನು ತಿಳಿದುಕೊಳ್ಳಿ(KYC-ECI) ಎಂಬ ತಂತ್ರಾಂಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳ ಮಾಹಿತಿ ಲಭ್ಯಬಿದೆ. ತಾವೆಲ್ಲರೂ ತಂತ್ರಾಂಶವನ್ನು ಡೌನ್ ಲೋಡ್ ಮಾಡಿಕೊಂಡು ಅಭ್ಯರ್ಥಿಯ ಬಗ್ಗೆ ತಿಳಿದುಕೊಂಡು ಎಂದು ಹೇಳಿದರು.

ಚುನಾವಣಾ ರಾಯಬಾರಿ ಹಾಗೂ ಚಿತ್ರ ನಟರಾದ ರಮೇಶ್ ಅರವಿಂದ್ ಮಾತನಾಡಿ, ಒಂದು ಇಟ್ಟಿಗೆಯಿಂದ ಕಟ್ಟಡ ಕಟ್ಟಲು ಸಾಧ್ಯವಿಲ್ಲ. ಸಾವಿರಾರು ಇಟ್ಟಿಗೆಗಳು ಸೇರಿದರೆ ಮಾತ್ರ ಕಟ್ಟಡ ಕಟ್ಟಲು ಸಾಧ್ಯ. ಅದೇ ರೀತಿ ಪ್ರತಿಯೊಂದು ಮತದಾರನೂ ಒಂದೊಂದು ಇಟ್ಟಿಗೆಯ ಹಾಗೆ, ಎಲ್ಲರೂ ಒಟ್ಟಾಗಿ ಸೇರಿದರೆ ಮಾತ್ರ ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ನಿಮ್ಮಲ್ಲೆರ ಕನಸು ಈಡೇರಬೆಕಾದರೆ ಮತದಾನ ದಿನವಾದ ಏಪ್ರಿಲ್ 26ರಂದು ನೀವೆಲ್ಲರೂ ಒಟ್ಟಾಗಿ ಸೇರಿದರೆ ಮಾತ್ರ ನಿಮ್ಮ ಡ್ರೀಮ್ ಟೀಮ್ ಕಟ್ಟಬಹುದು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಯುವ ಮತದಾರರಿಂದ ಮಾತ್ರ ಬದಲಾಯಿಸುವ ಸಾಮರ್ಥ್ಯವಿದೆ. ಆದ್ದರಿಂದ ನಿಮ್ಮ ಸ್ವವಿವೇಚನೆಯಿಂದ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಮತ ಚಾಲಾಯಿಸಲು ತಿಳಿಸಿದರು.

ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಹಾರಾಣಿ ಕಾಲೇಜು, ನೃಪತುಂಗಾ ವಿಶ್ವವಿದ್ಯಾನಿಲಯ, ಆರ್.ವಿ ಕಾಲೇಜು, ಎಸ್.ಜೆ.ಆರ್.ಸಿ ಕಾಲೇಜು ಸೇರಿದಂತೆ ಹಲವಾರು ಕಾಲೇಜುಗಳಿಂದ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೇ ವೇಳೆ ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಲಿಂಗರಾಜು ಗಾಂಧಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ್, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿಯಾದ ಪ್ರತಿಭಾ, ರಮಾಮಣಿ, ಇನ್ನಿತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos