ಬೆಳಗಾವಿ, ನ. 18: ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ, ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ಗೋಕಾಕ್ ತಹಶೀಲ್ದಾರ್ ಕಚೇರಿಯಲ್ಲಿ, ಪುರೋಹಿತರ ಸೂಚನೆಯ ಮೇರೆಗೆ ಶುಭ ಮುಹೂರ್ತದಲ್ಲಿ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು. ಅವರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ, ಸಹೋದರ ಬಾಲಚಂದ್ರ ಜಾರಕಿಹೊಳಿ, ಪುತ್ರ ಅಮರನಾಥ್ ಜಾರಕಿಹೊಳಿ, ಎ.ಎಸ್. ಕೋತ್ವಾಲ್ ಹಾಗೂ ಶಶಿಧರ ದೇಮಶೆಟ್ಟಿ ಸಾಥ್ ನೀಡಿದ್ರು.
ನಾಮಿನೇಷನ್ ಬಳಿಕ ಮಾತಾಡಿದ ರಮೇಶ್ ಜಾರಕಿಹೊಳಿ, ಮೂರು ನಾಮಪತ್ರಗಳನ್ನು ಸಲ್ಲಿಸುತ್ತಿದ್ದೇವೆ. ಪುರೋಹಿತರ ಸೂಚನೆಯಂತೆ ಸದ್ಯ 2 ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಮಧ್ಯಾಹ್ನ ಬೃಹತ್ ಮೆರವಣಿಗೆಯಲ್ಲಿ ತೆರಳಿ ಮತ್ತೊಂದು ನಾಮಪತ್ರ ಸಲ್ಲಿಸಲಾಗುವುದು. ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು ತಿಳಿಸಿದರು.