ರಮೇಶ್ ಜಾರಕಿಹೊಳಿಗೆ ಆಸ್ತಿ ಹರಾಜು ಆತಂಕ

ರಮೇಶ್ ಜಾರಕಿಹೊಳಿಗೆ ಆಸ್ತಿ ಹರಾಜು ಆತಂಕ

ಬೆಳಗಾವಿ, ಜೂ. 27 : ಕಾಂಗ್ರೆಸ್ ನಿಂದ ಬಂಡಾಯ ಸಾರಿದ್ದ ಬೆಳಗಾವಿಯ ಸಾಹುಕಾರ ರಮೇಶ್ ಜಾರಕಿಹೊಳಿ ಇದೀಗ ಸಾಲದ ಸುಳಿಯಲ್ಲಿ ಸಿಲುಕಿ, ಸೈಲೆಂಟ್ ಆಗಿದ್ದಾರೆ ಎನ್ನಲಾಗುತ್ತಿದೆ.

ಆಪರೇಷನ್ ಕಮಲದ ಮುಂದಾಳತ್ವ ವಹಿಸಿಕೊಂಡು ಸರ್ಕಾರ ಕೆಡವಲು ಹೊರಟಿದ್ದ ಮಾಜಿ ಸಚಿವ, ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಸೈಲೆಂಟ್ ಆಗಿರುವ ಹಿಂದೆ, ಸಾಲದ ಸುಳಿ ಕಾರಣ ಎನ್ನಲಾಗುತ್ತಿದೆ.

ಏಕೆಂದರೇ ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯಿಂದ 253 ಕೋಟಿ ರೂ ಸಾಲ ಬಾಕಿ ಇದೆ. ಈ ಬಗ್ಗೆ ಕಳೆದ 6 ತಿಂಗಳ ಹಿಂದೆಯೇ ಅಪೆಕ್ಸ್ ಬ್ಯಾಂಕ್ ನಿಂದ ಸಾಲ ಮರುಪಾವತಿಗಾಗಿ ನೋಟಿಸ್ ಕಳುಹಿಸಲಾಗಿದೆ.

ಅಂದಹಾಗೇ ಅಪೆಕ್ಸ್ ಬ್ಯಾಂಕ್ ಬೆಂಗಳೂರಿನಲ್ಲಿ 119 ಕೋಟಿ, ಡಿಸಿಸಿ ಬ್ಯಾಂಕ್ ತುಮಕೂರಿನಿಂದ 31 ಕೋಟಿ, ಸೌಥ್ ಕೆನರಾ ಡಿಸಿಸಿ ಬ್ಯಾಂಕ್ ಮಂಗಳೂರು 31 ಕೋಟಿ, ಡಿಸಿಸಿ ಬ್ಯಾಂಕ್ ಶಿರಸಿ 31 ಕೋಟಿ ಸಾಲ ಪಡೆದಿದ್ದಾರೆ. ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ಸಾಲ ಪಡೆದುಕೊಂಡಿರುವ ರಮೇಶ್ ಜಾರಕಿಹೊಳಿ, ಸಾಲ ಮರುಪಾವತಿ ಮಾಡದ ಹಿನ್ನಲೆಯಲ್ಲಿ ಸಕ್ಕರೆ ಕಾರ್ಖಾನೆ ಮುಟ್ಟುಗೋಲು ಹಾಕಲು ಅಪೆಕ್ಸ್ ಬ್ಯಾಂಕ್ ಚಿಂತನೆ ನಡೆಸಿದೆ ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos