‘ರಂಗೀಲಾ’ ಊರ್ಮಿಳಾ ಮುಂಬೈ ಉತ್ತರದ ಕಾಂಗ್ರೆಸ್ ಅಭ್ಯರ್ಥಿ!

‘ರಂಗೀಲಾ’ ಊರ್ಮಿಳಾ ಮುಂಬೈ ಉತ್ತರದ ಕಾಂಗ್ರೆಸ್ ಅಭ್ಯರ್ಥಿ!

ಬೆಂಗಳೂರು, ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಾಲಿವುಡ್ ನಟಿ ಊರ್ಮಿಳಾ ಮಾತೊಂಡ್ಕರ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ ಊರ್ಮಿಳಾ ಮಾತೊಂಡ್ಕರ್ (45) ಅವರ ಹೆಸರು ಕಾಂಗ್ರೆಸ್ ಪಕ್ಷದ ನಾಯಕತ್ವದಲ್ಲಿ ಪರಿಗಣನೆಗೆ ಬಂದಿದೆ. ಈ ಕುರಿತು ಅಂತಿಮ ನಿರ್ಧಾರ ಶೀಘ್ರದಲ್ಲಿಯೇ ಹೊರಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಟಿಕೆಟ್ ಕೈತಪ್ಪಿದ್ದಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಏನಂದ್ರು? ಸೋಮವಾರವಷ್ಟೇ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಮಿಲಿಂದ್ ದೇವೊರಾ ಅವರಿಗೆ ಬಿಟ್ಟುಕೊಟ್ಟ ಸಂಜಯ್ ನಿರುಪಮ್ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಮಹಾರಾಷ್ಟ್ರ ವಕ್ತಾರರು ಮತ್ತು ಊರ್ಮಿಳಾ ಅವರ ಕುಟುಂಬದ ಸದಸ್ಯರು ಕೂಡ ಈ ಕುರಿತು ಹೇಳಿಕೆ ನೀಡಲು ನಿರಾಕರಿಸಿದ್ದಾರೆ. ಒಂದು ವೇಳೆ ಊರ್ಮಿಳಾ ಅವರ ಹೆಸರು ಅಂತಿಮಗೊಂಡರೆ ಅವರು ಬಿಜೆಪಿಯ ಹಾಲಿ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಎದುರಿಸಲಿದ್ದಾರೆ. 2004ರಲ್ಲಿ ಇದೇ ಕ್ಷೇತ್ರದಿಂದ ನಟ ಗೋವಿಂದ ಪೆಟ್ರೋಲಿಯಂ ಖಾತೆ ಮಾಜಿ ಸಚಿವ ರಾಮ್ ನಾಯ್ಕ್ ಅವರನ್ನು ಸೋಲಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos