ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ

ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ

ಬೆಂಗಳೂರು: ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನನ್ನು ಸ್ಥಳೀಯರೇ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ      ನಡೆದಿದೆ.

ಮಧ್ಯಾಹ್ನ ಆರೋಪಿ ಬಾಗಿಲು ಬಡಿದ, ಬಾಗಿಲು ತೆರೆಯುತ್ತಿದ್ದಂತೆ ಏಕಾಏಕಿ ಮನೆಯೊಳಗೆ ನುಗ್ಗಿದ ನನ್ನ ಬಾಯಿ ಮುಚ್ಚಿ ಕೋಣೆಗೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಹಲವು ಬಾರಿ ತಲೆಗೆ ಬಾಟಲಿಯಿಂದ ಹೊಡೆದಿದ್ದಾನೆ. ಹಾಗೂ ದೂರು
ನೀಡಿದ ಸಂತ್ರಸ್ತೆಯ ತುಟಿ ತುಂಡಾಗುವಂತೆ ಕಚ್ಚಿದ್ದಾನೆ. ಪ್ರಸ್ತುತ ಸಂತ್ರಸ್ತೆ ಆಸ್ಪತ್ರೆಯಲ್ಲಿ
ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ.

ಘಟನೆಗೂ ಮುನ್ನ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತಂತೆ,
ಇದೆ ಕಾರಣದಿಂದ ಕೊಲೆಗೆ ಯತ್ನಿಸಿದ್ದಾನೆ ಎನ್ನುವ ವರದಿಯಾಗಿದೆ. ಸಹಾಯಕ್ಕೆಂದು ಕೂಗಿಕೊಂಡಾಗ
ತಕ್ಷಣ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಪ್ರಕರಣವು ಬಾಗಲಗುಂಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos