ಕಿರುತೆರೆ ನಟಿ ಮೇಲೆ ಅತ್ಯಾಚಾರ

ಕಿರುತೆರೆ ನಟಿ ಮೇಲೆ ಅತ್ಯಾಚಾರ

ಬೆಂಗಳೂರು, ಮಾ. 02: ಇತ್ತೀಚಿನ ದಿನಗಳಲ್ಲಿ ಸಿನಿಮಾರಂಗದಲ್ಲಿ ಹುಡುಗಿಯರಿಗೆ ಸಿನಿಮಾ ಹಾಗೂ ಕಿರುತೆರೆಯಲ್ಲಿ ಅವಕಾಶ ಕೊಡಿಸುತ್ತೇನೆ ಎಂದು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ನೀಡುತ್ತಿರುವುದು ಹೆಚ್ಚಾಗುತ್ತಿದ್ದು, ಇದರಿಂದ ಇವರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.

ಹೌದು ಸಿಲಿಕಾನ್ ಸಿಟಿಯಲ್ಲಿ ನಿರ್ಮಾಪಕರೊಬ್ಬರು ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಕನ್ನಡ ಕಿರುತೆರೆ ನಟಿ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಸದ್ಯ, ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹೆಬ್ಬಾಳ ನಿವಾಸಿಯಾಗಿರುವ ಕಿರುತೆರೆ ನಟಿ ಈ ಪ್ರಕರಣದ ಸಂತ್ರಸ್ತೆ. 6 ವರ್ಷಗಳ ಹಿಂದೆ ಅವಕಾಶ ನೀಡುವುದಾಗಿ ನಂಬಿಸಿ ನಿರ್ಮಾಪಕ ಸಂಗಮೇಶ್ ನಟಿಯನ್ನು ಹೈದರಾಬಾದ್ಗೆ ಕರೆಸಿಕೊಂಡಿದ್ದ. ಈ ವೇಳೆ ಮತ್ತೂ ಬರಿಸುವ ತಂಪುಪಾನೀಯ ನೀಡಿ ಅತ್ಯಾಚಾರ ನಡೆಸಿರುವುದಾಗಿ ನಟಿ ಆರೋಪಿಸಿದ್ದಾರೆ ಎನ್ನಲಾಗಿದೆ.

2013ರಲ್ಲಿ ಈ ಘಟನೆ ನಡೆದಿತ್ತು. 2014ರಲ್ಲಿ ಸಂಗಮೇಶ್ ಬ್ಲಾಕ್ಮೇಲ್ ಮಾಡಲು ಶುರುಮಾಡಿದ್ದ. ನಗ್ನ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ, ಗೋವಾಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದ. ನಿರಂತರವಾಗಿ ನಟಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿ ಸಂತ್ರಸ್ತೆಗೆ ಮದುವೆಯಾಗುವ ಭರವಸೆ ನೀಡಿದ್ದ.

ಸಂಗಮೇಶ್ ಈಗಾಗಲೇ ಮದುವೆಯಾಗಿದ್ದು, ಮಕ್ಕಳು ಕೂಡ ಇದ್ದಾರೆ. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದ. ಪ್ರಕರಣದಲ್ಲಿ ರಾಜಿ ಮಾಡುವುದಾಗಿ  ಸಂತ್ರಸ್ತೆಯನ್ನು ಸಂಗಮೇಶ್ ಮನೆಗೆ ಕರೆಸಿಕೊಂಡಿದ್ದ. ಈ ವೇಳೆ ಸಂಗಮೇಶ್ ಪತ್ನಿ ನಟಿ ವಿರುದ್ದವೇ ಸ್ಥಳೀಯ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರಂತೆ. ಈ ಬಗ್ಗೆಯೂ ನಟಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಂಚನೆ ಮತ್ತು ಬ್ಲಾಕ್ ಮೇಲ್ ಮಾಡುತ್ತಿದ್ದ ನಿರ್ಮಾಪಕನ ವಂಚನೆಗೆ ನ್ಯಾಯ ಒದಗಿಸುವಂತೆ ನಟಿ ಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದ ಸೂಚನೆ ಹಿನ್ನಲೆಯಲ್ಲಿ ಅಮೃತಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos