ಅತ್ಯಾಚಾರ ನಡೆಸಿ ಸುಟ್ಟ ಕಾಮುಕರು

ಅತ್ಯಾಚಾರ ನಡೆಸಿ ಸುಟ್ಟ ಕಾಮುಕರು

ಹೈದರಾಬಾದ್ ನ. 29 : 22 ವರ್ಷದ ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಸುಟ್ಟು ಹಾಕಿರುವ ಘಟನೆ
ಹೈದರಬಾದ್ ನಲ್ಲಿ ನಡೆದಿದೆ.
ಪಶುವೈದ್ಯೆ ರಾತ್ರಿ ಕೆಲಸ ಮುಗಿಸಿ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಜನನಿಬಿಡ ಪ್ರದೇಶದಲ್ಲಿ ರಾತ್ರಿ 9.30ರ ಸುಮಾರಿಗೆ ಆಕೆಯ ಬೈಕ್ ಪಂಕ್ಚರ್ ಆಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಯುವಕರು ಆಕೆಯ ಸ್ಕೂಟಿಯನ್ನು ತೆಗೆದುಕೊಂಡು ಹೋಗಿ ಪಂಕ್ಚರ್ ಕಟ್ಟಿಸಿಕೊಂಡು ಬರುವುದಾಗಿ ಹೇಳಿದ್ದರು.
ಈ ವಿಚಾರವನ್ನು ಆಕೆ ಮನೆಗೆ ಕರೆ ಮಾಡಿ ಹೇಳಿದ್ದರು. ಅಷ್ಟೇ ಅಲ್ಲ, ಪಕ್ಕದಲ್ಲಿ ಲಾರಿ ಚಾಲಕರಿದ್ದಾರೆ. ಅವರನ್ನು ನೋಡಿ ನನಗೆ ಭಯವಾಗುತ್ತಿದೆ ಎಂದು ಆಕೆ ದೂರವಾಣಿ ಕರೆಯಲ್ಲಿ ಹೇಳಿದ್ದರು. ನಂತರ ಆಕೆ ಮೊಬೈಲ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ರಾತ್ರಿ 11 ಗಂಟೆಗೆ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos