ಮೈಸೂರು: ಯುವತಿ ಮೇಲೆ ನಾಲ್ವರು ಅತ್ಯಾಚಾರ

ಮೈಸೂರು: ಯುವತಿ ಮೇಲೆ ನಾಲ್ವರು ಅತ್ಯಾಚಾರ

ಮೈಸೂರು: ಯುವತಿ ಮೇಲೆ ನಾಲ್ವರು ಅತ್ಯಾಚಾರ ಎಸಗಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಭಾನುವಾರ ರಾತ್ರಿ ಆಲನಹಳ್ಳಿ ಬಳಿ ರಸ್ತೆ ಬದಿಯಲ್ಲಿ ಉಪಾಹಾರ ಸೇವಿಸಿದ ನಂತರ ಯುವತಿಯು ಕಳೆದ ಮೂರು ತಿಂಗಳ ಹಿಂದಷ್ಟೆ ಪರಿಚಯವಾಗಿದ್ದ ಕಾರು ಚಾಲಕ ಚಿರಾಗ್‌ ಎಂಬಾತನಿಗೆ ಫೋನ್‌ ಮಾಡಿ ಮನೆಗೆ ಕರೆದುಕೊಂಡು ಹೋಗುವಂತೆ ಕೋರಿದ್ದಾರೆ.
ಈ ವೇಳೆ ಬಂದ ಚಿರಾಗ್, ಯುವತಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಕೊಳ್ಳೇಗಾಲದ ಕಡೆಗೆ ಹೋಗುವ ರಸ್ತೆಯಲ್ಲಿ ಅರ್ಧ ಕಿ.ಮೀ ಹೋಗಿದ್ದಾನೆ. ನಂತರ ಇತರ ಮೂವರನ್ನು ಕಾರಿಗೆ ಹತ್ತಿಸಿಕೊಂಡಿದ್ದಾರೆ. ಮುಂದೆ ನಿರ್ಜನ ಪ್ರದೇಶವೊಂದರಲ್ಲಿ ಯುವತಿ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಯುವತಿಯನ್ನು ಅಲ್ಲೇ ಬಿಟ್ಟು ತೆರಳಿದ್ದಾರೆ. ಆಟೋ ಮೂಲಕ ಯುವತಿ ಮನೆ ಸೇರಿದ್ದಾರೆ.
ದೂರು ಕೊಡುವುದು ಬೇಡ ಎಂದು ಯುವತಿ ಪೋಷಕರು ಹೇಳಿದ್ದರು. ಆದರೆ, ಗೆಳತಿಯೊಬ್ಬರು ದೂರು ನೀಡುವಂತೆ ಹೇಳಿದ್ದರಿಂದ ತಡವಾಗಿ ದೂರು ನೀಡುತ್ತಿರುವುದಾಗಿ ಯುವತಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರೋಪಿಯ ಹುಡುಕಾಟ ನಡೆಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos