ಪಶ್ಚಿಮ ಬಂಗಾಳದಲ್ಲಿ ‘ರಾಷ್ಟ್ರಪತಿ’ ಆಳ್ವಿಕೆ?

ಪಶ್ಚಿಮ ಬಂಗಾಳದಲ್ಲಿ ‘ರಾಷ್ಟ್ರಪತಿ’ ಆಳ್ವಿಕೆ?

ಕೋಲ್ಕತಾ, ಜೂನ್. 11, ನ್ಯೂಸ್ ಎಕ್ಸ್ ಪ್ರೆಸ್: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ-ಟಿಎಂಸಿ ನಡುವಿನ ಘರ್ಷಣೆ ಮತ್ತು ವಾಗ್ವಾದದ ಬಿಸಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಗೋಚರಿಸುತ್ತಿಲ್ಲ.  ಎರಡೂ ಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆದಿದ್ದು, ಪ್ರತಿಭಟನೆಗಳು, ಬಂದ್‌ನಂಥ ಘಟನೆ ನಡೆದಿವೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆಯೇ ಎಂಬ ಅನುಮಾನಗಳೂ ಮೂಡತೊಡಗಿವೆ.

ಇದಕ್ಕೆ ಪೂರಕವೆಂಬಂತೆ ಪಶ್ಚಿಮ ಬಂಗಾಲ ರಾಜ್ಯಪಾಲ ಕೇಸರಿನಾಥ್‌ ತ್ರಿಪಾಠಿ ಅವರು ಸೋಮವಾರ ದಿಲ್ಲಿಗೆ ತೆರಳಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿನ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದಾಗಿ ತ್ರಿಪಾಠಿ ಮಾಹಿತಿ ನೀಡಿದ್ದಾರೆ. ಆದರೆ ಮಾತುಕತೆಯ ಹೆಚ್ಚಿನ ವಿವರವನ್ನು ಬಹಿರಂಗಪಡಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

‘’ನಾನು ಪ್ರಧಾನಿ ಅಥವಾ ಅಮಿತ್‌ ಶಾ ಬಳಿ ರಾಷ್ಟ್ರಪತಿ ಆಳ್ವಿಕೆ ಹೇರುವ ವಿಚಾರದ ಕುರಿತು ಚರ್ಚಿಸಿಲ್ಲ ಎಂದಿದ್ದಾರೆ ತ್ರಿಪಾಠಿ. ಜತೆಗೆ, ಎಲ್ಲ ರಾಜಕೀಯ ಪಕ್ಷಗಳೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದೂ ಅವರು ಸಲಹೆ ನೀಡಿದ್ದಾರೆ. “ಇಂಡಿಯಾ ಟುಡೇ’ಗೆ ಸೋಮವಾರ ನೀಡಿದ ಸಂದರ್ಶನದಲ್ಲಿ ರಾಜ್ಯಪಾಲ ತ್ರಿಪಾಠಿ ಅವರು, ಪಶ್ಚಿಮ ಬಂಗಾಲದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋದರೆ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos