ರಾಸುಗಳ ಕಿಚ್ಚು ಹಾಯಿಸಿ ಡಿಬಾಸ್

ಬೆಂಗಳೂರು, ಜ. 16 : ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ತೋಟದ ಮನೆಯಲ್ಲಿ ರಾಸುಗಳ ಕಿಚ್ಚು ಹಾಯಿಸಿ ಸಂಕ್ರಾಂತಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.
ಡಿಬಾಸ್ ದರ್ಶನ್ ಅವರು ಮೈಸೂರಿನ ಟಿ.ನರಸೀಪುರದ ರಸ್ತೆಯಲ್ಲಿರುವ ತಮ್ಮ ತೂಗುದೀಪ ಫಾರಂನಲ್ಲಿ ಆಪ್ತರು ಹಾಗೂ ಗೆಳೆಯರೊಂದಿಗೆ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ತೋಟದ ಮನೆಯಲ್ಲಿರುವ ದನಗಳ ಜೊತೆ ತಮ್ಮಿಷ್ಟದ ಕುದುರೆಗಳನ್ನು ಕಿಚ್ಚು ಹಾಯಿಸಿ ಸಂಕ್ರಾಂತಿಯನ್ನು ಸಂಭ್ರಮಿಸಿದ್ದಾರೆ.
ನಟ ದರ್ಶನ್ ಅವರು ತಮ್ಮಿಷ್ಟದ ಬಿಳಿ ಕುದುರೆಯನ್ನು ಹಿಡಿದು ಕಿಚ್ಚು ಹಾಯಿಸುತ್ತಿರುವ ಫೋಟೋ ಹಾಗೂ ವಿಡಿಯೋವನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ `ರಾಬರ್ಟ್’ ಸಿನಿಮಾದ ಎರಡನೇ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್, `ಎಲ್ಲರಿಗೂ ವರ್ಷದ ಮೊದಲನೆಯ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಎಳ್ಳು, ಬೆಲ್ಲ ಸವಿಯುತ್ತಾ ನಮ್ಮ ರಾಬರ್ಟ್ ಚಿತ್ರದ ಎರಡನೇ ಲುಕ್ ಪೋಸ್ಟರ್ ನಿಮಗಾಗಿ ಬಿಡುಗಡೆ ಮಾಡುತ್ತಿದ್ದೇವೆ. ನೋಡಿ ಆಶೀರ್ವದಿಸಿ’ ಎಂದು ಬರೆದುಕೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos