ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ `ಬಿಜೆಪಿ’ಗೆ ಸೇರ್ಪಡೆ

ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ `ಬಿಜೆಪಿ’ಗೆ ಸೇರ್ಪಡೆ

ಕಲಬುರಗಿ, . 3, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಇಂದು ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಬುರಗಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗಮಿಸಲಿದ್ದು, ಈ ವೇಳೆ ಬಿಎವೈ ನೇತೃತ್ವದಲ್ಲಿ ರತ್ನಪ್ರಭಾ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕೆಲ ದಿನಗಳ ಹಿಂದೆ ರತ್ನಪ್ರಭಾ ಅವರು ಬಿಜೆಪಿ ಸೇರ್ಪಡಯಾಗಿ ಕಲಬುರ್ಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸುತ್ತಾರೆ ಎಂದು ಹೇಳಲಾಗಿತ್ತು.. ಒಟ್ಟಾರೆಯಾಗಿ ಲೋಕಸಭಾ ಚುನಾವಣೆ ಹತ್ತಿರ ಬರುವುದರೊಳಗೆ ಯಾರು ಪಕ್ಷದಿಂದ ಯಾವ ಪಕ್ಷಕ್ಕೆ ಹಾರುತ್ತಾರೋ ಗೊತ್ತಿಲ್ಲ.

 

ಫ್ರೆಶ್ ನ್ಯೂಸ್

Latest Posts

Featured Videos