GT ವಿರುದ್ದ RCB ತಂಡದ ಬೆಂಕಿ ಪರ್ಫಾರ್ಮೆನ್ಸ್

GT ವಿರುದ್ದ RCB ತಂಡದ ಬೆಂಕಿ ಪರ್ಫಾರ್ಮೆನ್ಸ್

ಬೆಂಗಳೂರು: ವುಮೆನ್ ಪ್ರೀಮಿಯರ್ ಲೀಗ್ನ ಪ್ರತಿಯೊಂದು ಪಂದ್ಯಗಳು ರೋಚಕತ್ತೆಯಿಂದ ಸಾಗಿದ್ದು ಒಳ್ಳೆಯ ಮನರಂಜನೆ ನೀಡುತ್ತಿದೆ ಚಿನ್ನಸ್ವಾಮಿ ಕ್ರೀಡಾಂಗಣ ಬ್ಯಾಟಿಂಗ್ ಹೆಸರುವಾಸಿಯಾಗಿದ್ದು ಇತ್ತೀಚಿನ ಪಂದ್ಯಗಳಲ್ಲಿ ಬೌಲರ್ ಗಳ ಗಮನ ಸೆರೆಯುತ್ತಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು.

ಇದಾಗ್ಯೂ ಕೆಳ ಕ್ರಮಾಂಕದಲ್ಲಿ ಆರ್​ಸಿಬಿ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಹೇಮಲತಾ 31 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುಜರಾತ್ ಜೈಂಟ್ಸ್ ತಂಡವು 107 ರನ್​ ಕಲೆಹಾಕಿತು.

108 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಪರ ಸೋಫಿ ಡಿವೈನ್ (6) ಮತ್ತೊಮ್ಮೆ ವಿಫಲರಾದರು. ಮತ್ತೊಂದೆಡೆ ನಾಯಕಿಯ ಆಟವಾಡಿದ ಸ್ಮೃತಿ ಮಂಧಾನ 27 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 43 ರನ್ ಬಾರಿಸಿ ಮಿಂಚಿದರು.

ಇನ್ನು ಸಬ್ಬಿನೇನಿ ಮೇಘನಾ ಅಜೇಯ 36 ಹಾಗೂ ಎಲ್ಲಿಸ್ ಪೆರ್ರಿ ಅಜೇಯ 23 ರನ್​ ಬಾರಿಸುವ ಮೂಲಕ 12.3 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಆರ್​ಸಿಬಿ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಫ್ರೆಶ್ ನ್ಯೂಸ್

Latest Posts

Featured Videos