ಆರ್​ಸಿಬಿ ಅಬ್ಬರಕ್ಕೆ ಯುಪಿ ತತ್ತರ

ಆರ್​ಸಿಬಿ ಅಬ್ಬರಕ್ಕೆ ಯುಪಿ ತತ್ತರ

ಬೆಂಗಳೂರು: ವುಮೆನ್ ಪ್ರೀಮಿಯರ್ ಲೀಗ್ ನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು ಇನ್ನೆರಡು ಪಂದ್ಯಗಳನ್ನು ಸೋತಿದ್ದು ನಿನ್ನೆ ಬೆಂಗಳೂರು ಬುಲ್ಸ್ 5ನೇ ಪಂದ್ಯವಾಡಲಿದ್ದು. ಈ ಪಂದ್ಯದಲ್ಲಿ ಅಬ್ಬರದ ಆಟವಾಡಿದ ಆರ್​ಸಿಬಿ ತಂಡ ಅಭಿಮಾನಿಗಳಿಗೆ ರಸದೌತನ ನೀಡಿದೆ.

ವುಮೆನ್ಸ್​ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಮತ್ತು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಿತ್ತು.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಪ್ರೀಮಿಯರ್ ಲೀಗ್‌ ನ ಎರಡನೇ ಆವೃತ್ತಿಯ ಕೊನೆಯ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು 23 ರನ್​ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಲೀಗ್​ನಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ವಾಸ್ತವವಾಗಿ ಲೀಗ್​ನ ಮೊದಲೆರಡು ಪಂದ್ಯಗಳನ್ನು ಗೆದ್ದು ಬೀಗಿದ್ದ ಆರ್​ಸಿಬಿ, ಆ ನಂತರ ಸತತ ಎರಡು ಪಂದ್ಯಗಳನ್ನು ಸೋತು ಲಯ ಕಳೆದುಕೊಂಡಿತ್ತು. ಆದರೆ ತವರಿನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ತಂಡದ ಬ್ಯಾಟರ್​ಗಳಾದ ಸ್ಮೃತಿ ಮಂಧಾನ ಹಾಗೂ ಎಲ್ಲಿಸ್ ಪೆರ್ರಿ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಬೌಲರ್​ಗಳ ಸಾಂಘಿಕ ದಾಳಿಯಿಂದ ತಂಡ ಕೊನೆಗೂ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡಕ್ಕೆ ಈ ಬಾರಿ ಉತ್ತಮ ಆರಂಭ ಸಿಕ್ಕಿತು. ಈ ಇಬ್ಬರು ಮೊದಲ ವಿಕೆಟ್​ಗೆ 51 ರನ್​ಗಳ ಜೊತೆಯಾಟ ನೀಡಿದರು.

ಆ ಬಳಿಕ ನಾಯಕಿ ಸ್ಮೃತಿಗೆ ಸಾಥ್ ನೀಡಿದ ಎಲ್ಲಿಸ್ ಪೆರ್ರಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ವೇಳೆ ನಾಯಕಿ ಸ್ಮೃತಿ ಮಂಧಾನ ಕೇವಲ 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕ ಮತ್ತಷ್ಟು ರೌದ್ರಾವತಾರ ತಾಳಿದ ಸ್ಮೃತಿ ಮೈದಾನದಲ್ಲಿ ಬೌಂಡರಿಗಳ ಮಳೆಗರೆದು. ಅಂತಿಮವಾಗಿ ಸ್ಮೃತಿ ಮತ್ತೊಂದು ಶತಕ ವಂಚಿತರಾಗಿ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 80 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂಲಕ ಆರೆಂಜ್ ಕ್ಯಾಪ್ ಕೂಡ ತನ್ನದಾಗಿಸಿಕೊಂಡರು.

ಎಲ್ಲಿಸ್ ಪೆರ್ರಿ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 37 ಎಸೆತಗಳನ್ನು ಎದುರಿಸಿದ ಪೆರ್ರಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 58 ರನ್ ಕಲೆಹಾಕಿ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು. ಈ ಇಬ್ಬರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿತು.

ಆರ್​ಸಿಬಿ ನೀಡಿದ 199 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಯುಪಿ ವಾರಿಯರ್ಸ್​ ತಂಡ ಕೂಡ ಆರಂಭದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿತು. ನಾಯಕಿ ಅಲಿಸ್ಸಾ ಹೀಲಿ ಹಾಗೂ ಕಿರಣ್ ನವ್ಗಿರೆ ಮೊದಲ ವಿಕೆಟ್​ಗೆ 47 ರನ್​ಗಳ ಜೊತೆಯಾಟ ನೀಡಿದರು. ಆದರೆ 11 ಎಸೆತಗಳಲ್ಲಿ 18 ರನ್ ಕಲೆಹಾಕಿದ್ದ ಕಿರಣ್ ಸೋಫಿ ಡಿವೈನ್​ಗೆ ಬಲಿಯಾದ ಬಳಿಕ ತಂಡದ ಇನ್ನಿಂಗ್ಸ್ ವೇಗ ಕಡಿಮೆಯಾಯಿತು. ಆದರೂ ಒಂದು ತುದಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ನಾಯಕಿ ಹೀಲಿ 38 ಎಸೆತಗಳಲ್ಲಿ 55 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಇವರನ್ನು ಹೊರತುಪಡಿಸಿದರೆ, ದೀಪ್ತಿ ಶರ್ಮಾ ಮತ್ತು ಪೂನಂ ಖೇಮ್ನಾರ್ ಕ್ರಮವಾಗಿ 33 ಹಾಗೂ 31 ರನ್ ಸಿಡಿಸಿ ತಂಡದ ಗೆಲುವಿಗೆ ಹೋರಾಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

 

ಫ್ರೆಶ್ ನ್ಯೂಸ್

Latest Posts

Featured Videos