ಕೆಕೆಆರ್ ಅಬ್ಬರಕ್ಕೆ ಮಣಿದ ಆರ್‌ಸಿಬಿ

ಕೆಕೆಆರ್ ಅಬ್ಬರಕ್ಕೆ ಮಣಿದ ಆರ್‌ಸಿಬಿ

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಎಂದರೆ ಕ್ರೀಕೆಟ್‌ ಅಭಿಮಾನಿಗಳಿಗೆ ರಸದೌತನ. ಐಪಿಎಲ್‌ ಆರಂಭವಾಗಿ ಎಲ್ಲಾ ತಂಡಗಳು ಒಂದೊಂದು ಪಂದ್ಯಗಳನೂ ಆಡಿದ್ದಾರೆ. ನಿನ್ನೆ ನಡೆದ 10ನೇ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಿತ್ತು. ಆರ್‌ಸಿಬಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭಿಕ ಆಘಾತ ಅನುಭವಿಸಿತು.

ಇದರ ಹೊರತಾಗಿಯೂ ವಿರಾಟ್ ಕೊಹ್ಲಿ ಬಾರಿಸಿದ ಅಜೇಯ 83 ಹಾಗೂ ಕ್ಯಾಮರೋನ್ ಗ್ರೀನ್ (33) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಿನಲ್ಲಿ ಮತ್ತೊಮ್ಮೆ ಕೋಲ್ಕತಾ ನೈಟ್ ರೈಡರ್ಸ್‌ಗೆ ಶರಣಾಗಿದೆ. ಕೆಕೆಆರ್ ಅಬ್ಬರದ ಬ್ಯಾಟಿಂಗ್‌ಗೆ ಆರ್‌ಸಿಬಿ ಫುಲ್ ಸೈಲೆಂಟ್. ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಕೆಕೆಆರ್ ತಂಡವು ಇನ್ನೂ 19 ಎಸೆತ ಬಾಕಿ ಇರುವಂತೆಯೇ 7 ವಿಕೆಟ್ ಸುಲಭ ಗೆಲುವು ಸಾಧಿಸಿದೆ.

ಚಿನ್ನಸ್ವಾಮಿ ಮೈದಾನದಲ್ಲಿ ಗೆಲ್ಲಲು 183 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಸುನಿಲ್ ನರೈನ್ ಹಾಗೂ ಫಿಲ್ ಸಾಲ್ಟ್ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಆರ್‌ಸಿಬಿ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಈ ಜೋಡಿ ಪವರ್ ಪ್ಲೇನಲ್ಲೇ 85 ರನ್‌ ಕಲೆಹಾಕಿತು.

ಇದಾದ ಬಳಿಕ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿದ ವೆಂಕಟೇಶ್ ಅಯ್ಯರ್ 30 ಎಸೆತಗಳಲ್ಲಿ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮತ್ತೊಂದು ತುದಿಯಲ್ಲಿ ನಾಯಕ ಶ್ರೇಯಸ್ ಅಯ್ಯರ್ ಅಜೇಯ 39 ರನ್ ಬಾರಿಸಿ ತಂಡವನ್ನು ಅನಾಯಾಸವಾಗಿ ಗೆಲುವಿನ ದಡ ಸೇರಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos