ಎಂಎ ಚಿದಂಬರಂ ಸ್ಟೇಡಿಯಂನಲ್ಲಿ CSK ವಿರುದ್ಧ ಮತ್ತೊಮ್ಮೆ RCB ಮುಗ್ಗರಿಸಿದೆ

ಎಂಎ ಚಿದಂಬರಂ ಸ್ಟೇಡಿಯಂನಲ್ಲಿ CSK ವಿರುದ್ಧ ಮತ್ತೊಮ್ಮೆ RCB ಮುಗ್ಗರಿಸಿದೆ

ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸಿಎಸ್​ಕೆ ತಂಡಗಳು ಮುಖಾಮುಖಿಯಾಗಿತ್ತು. 2024 ರ ಮೊದಲ ಪಂದ್ಯವೇ ಅಭಿಮಾನಿಗಳಿಗೆ ರಸದೌತಣ ಬಡಿಸಿದೆ.

ಇದು RCBಯ ಹೊಸ ಅಧ್ಯಾಯ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ 2024 ಅಭಿಯಾನ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 5785 ದಿನಗಳ ಬಳಿಕವೂ ಹಳೆಯ ಅಧ್ಯಾಯವನ್ನು ಮುಂದುವರೆಸಿದೆ. ಅಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ವಿರುದ್ಧ ಮತ್ತೊಮ್ಮೆ ಆರ್​ಸಿಬಿ ಮುಗ್ಗರಿಸಿದೆ.

ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.

174 ರನ್​ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್​ ಬಾರಿಸಿ ನಿರಾಯಾಸವಾಗಿ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತವರಿನಲ್ಲಿ ಆರ್​ಸಿಬಿ ವಿರುದ್ಧದ ಗೆಲುವಿನ ನಾಗಾಲೋಟ ಮುಂದುವರೆಸಿದೆ.

ಅಂದರೆ ಆರ್​ಸಿಬಿ ತಂಡವು ಚೆನ್ನೈನಲ್ಲಿ ಗೆಲುವು ದಾಖಲಿಸಿ ಬರೋಬ್ಬರಿ 16 ವರ್ಷಗಳೇ ಕಳೆದಿವೆ. 2008 ರಲ್ಲಿ ಮೊದಲ ಜಯ ಸಾಧಿಸಿದ ಬಳಿಕ ಸಿಎಸ್​ಕೆ ವಿರುದ್ಧ  ಎಂಎ ಚಿದಂಬರಂ ಸ್ಟೇಡಿಯಂ ಮೈದಾನದಲ್ಲಿ ಗೆಲುವು ಕಂಡಿಲ್ಲ.

 

ಫ್ರೆಶ್ ನ್ಯೂಸ್

Latest Posts

Featured Videos