RCB ದಾಖಲೆ ಸರಿಗಟ್ಟಿದ PBKS

RCB ದಾಖಲೆ ಸರಿಗಟ್ಟಿದ PBKS

ಕೊಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ನಿನ್ನೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಪಂದ್ಯವು ಅತ್ಯಂತ ರೋಚಕತೆಗೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 6 ವಿಕೆಟ್ ಕಳೆದುಕೊಂಡು 261 ರನ್ ಕಲೆಹಾಕಿತು.

262 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಪಂಜಾಬ್ ಕಿಂಗ್ಸ್ ಇತಿಹಾಸ ಸೃಷ್ಟಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ಹೊಸ ಹಿತಿಹಾಸ ಸೃಷ್ಟಿಸಿದೆ. ಅದೂ ಕೂಡ ನಮ್ಮ ಆರ್ ಸಿಬಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇ‍ಷವಾಗಿದೆ.

ಅಂದರೆ ಟಿ20 ಕ್ರಿಕೆಟ್​ನಲ್ಲಿ ದ್ವಿತೀಯ ಇನಿಂಗ್ಸ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಆರ್​ಸಿಬಿ ತಂಡದ ಹೆಸರಿನಲ್ಲಿತ್ತು. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ದ 20 ಓವರ್​ಗಳಲ್ಲಿ 262 ರನ್ ಕಲೆಹಾಕಿ ಆರ್​ಸಿಬಿ ಈ ವಿಶೇಷ ವಿಶ್ವ ದಾಖಲೆ ಬರೆದಿತ್ತು.

ಆದರೀಗ ಕೆಕೆಆರ್ ವಿರುದ್ಧ 18.4 ಓವರ್​ಗಳಲ್ಲಿ 262 ರನ್ ಕಲೆಹಾಕುವ ಮೂಲಕ ಪಂಜಾಬ್ ಕಿಂಗ್ಸ್ ಈ ದಾಖಲೆಯನ್ನು ಮುರಿದಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ದ್ವಿತೀಯ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಪಂಜಾಬ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ.

ಫ್ರೆಶ್ ನ್ಯೂಸ್

Latest Posts

Featured Videos