ಆರ್ ಸಿಬಿ ಹಾಗೂ ಡಿಸಿ ಮುಖಾಮುಖಿ

ಆರ್ ಸಿಬಿ ಹಾಗೂ ಡಿಸಿ ಮುಖಾಮುಖಿ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಇಂದು ನಡೆಯುವ ಮಹಿಳಾ ಪ್ರೀಮಿಯರ್ ಲೀಗ್‌ನ 7ನೇ ಪಂದ್ಯದಲ್ಲಿ ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ 7ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ 3ನೇ ಮ್ಯಾಚ್ ಎಂಬುದು ವಿಶೇಷ. ಅಂದರೆ ಎರಡೂ ತಂಡಗಳು ಈಗಾಗಲೇ ತಲಾ 2 ಪಂದ್ಯಗಳನ್ನಾಡಿದೆ.

ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್​ ತಂಡವು 2ನೇ ಪಂದ್ಯದದಲ್ಲಿ ಯುಪಿ ವಾರಿಯರ್ಸ್ ವಿರುದ್ಧ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಮತ್ತೊಂದೆಡೆ ಆರ್​ಸಿಬಿ ತಂಡವು ಎರಡೂ ಪಂದ್ಯಗಳಲ್ಲೂ ಜಯಭೇರಿ ಬಾರಿಸಿದೆ.

ಯುಪಿ ವಾರಿಯರ್ಸ್ ವಿರುದ್ಧ ಮೊದಲ ಮ್ಯಾಚ್​ನಲ್ಲಿ 2 ರನ್​ಗಳ ರೋಚಕ ಜಯ ಸಾಧಿಸಿದ್ದ ಆರ್​ಸಿಬಿ, ಗುಜರಾತ್ ಜೈಂಟ್ಸ್ ವಿರುದ್ಧ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಹ್ಯಾಟ್ರಿಕ್ ಜಯ ಸಾಧಿಸುವ ಇರಾದೆಯಲ್ಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos