ಇಂದು RCB vs MI ಮುಖಾಮುಖಿ

ಇಂದು RCB vs MI ಮುಖಾಮುಖಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೊದಲ ಆವೃತ್ತಿಯಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ದೊಡ್ಡ ಪ್ರತಿಸ್ಪರ್ಧಿಗಳಾಗಿವೆ. ಎರಡೂ ತಂಡಗಳೂ ತಮ್ಮ ಹಿಂದೆ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದು, ಇದೀಗ 2024ರ ಆವೃತ್ತಿಯಲ್ಲಿ ಮತ್ತೆ ಕಾದಾಟಕ್ಕೆ ಸಜ್ಜಾಗಿವೆ.

ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 25ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಮತ್ತು ಪ್ರವಾಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕದನಕ್ಕೆ ಸಿದ್ಧವಾಗಿವೆ.

ಇದೇ ವೇಳೆ ಐಪಿಎಲ್ 2024ರ ಆವೃತ್ತಿಯು ಈವರೆಗೆ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ತಂಡಗಳಿಗೆ ಉತ್ತಮವಾಗಿಲ್ಲ. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋಲು ಮತ್ತು ಒಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 8ನೇ ಪಡೆದಿದ್ದರೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಆಡಿದ ಐದು ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಒಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದೆ.

ಮತ್ತೊಂದೆಡೆ, ಆರ್‌ಸಿಬಿ ತಂಡಕ್ಕೆ ಈ ಬಾರಿಯೂ ಸಂಪೂರ್ಣ ಬೌಲಿಂಗ್ ವಿಭಾಗ ಕೈಕೊಟ್ಟಿದೆ. ಆದರೆ, ವಿರಾಟ್ ಕೊಹ್ಲಿ ಬ್ಯಾಟ್‌ನೊಂದಿಗೆ ಅಗ್ರಸ್ಥಾನದಲ್ಲಿ ಏಕಾಂಗಿ ಹೋರಾಟ ನಡೆಸುತ್ತಿದ್ದು, ಉಳಿದ ಬ್ಯಾಟರ್‌ಗಳಿಂದ ಸೂಕ್ತ ಬೆಂಬಲ ಸಿಗುತ್ತಿಲ್ಲ. ನಾಯಕ ಫಾಫ್ ಡು ಪ್ಲೆಸಿಸ್ ಸೇರಿದಂತೆ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಕ್ಯಾಮೆರಾನ್ ಗ್ರೀನ್ ಎಲ್ಲರೂ ರನ್‌ಗಳಿಗಾಗಿ ಪರದಾಡುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos