ಇಂದು RCB vs RR ಮುಖಾಮುಖಿ

ಇಂದು RCB vs RR ಮುಖಾಮುಖಿ

ಬೆಂಗಳೂರು: ಇಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ರೋಚಕ ಕದನಕ್ಕೆ ಸಜ್ಜಾಗಿವೆ.

ಐಪಿಎಲ್ 2024ರ ಋತುವಿನಲ್ಲಿ ಹೆಣಗಾಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಎರಡನೇ ಗೆಲುವಿನ ಹುಡುಕಾಟದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ತಮ್ಮ ನಾಲ್ಕನೇ ಗೆಲುವನ್ನು ಎದುರು ನೋಡುತ್ತಿದೆ.

ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಯಾವಾಗಲೂ ತಮ್ಮ ತವರಿನ ಅಂಗಳದಲ್ಲಿ ಬಲಿಷ್ಠವಾಗಿದೆ. ಈ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜೈಪುರದಲ್ಲಿ ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದು ಬೀಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos