RCB ತಂಡಕ್ಕೆ ಮುಂದಿನ ಪಂದ್ಯಗಳು ಮಾಡುಯಿಲ್ಲವೇ ಮಡಿ

RCB ತಂಡಕ್ಕೆ ಮುಂದಿನ ಪಂದ್ಯಗಳು ಮಾಡುಯಿಲ್ಲವೇ ಮಡಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ಇದುವರೆಗೆ 7 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 6 ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ ತಂಡ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿದೆ.

7 ಪಂದ್ಯಗಳಲ್ಲಿ, 6 ಸೋಲು, 1 ಗೆಲುವು, ಈ ಬಾರಿಯ ಐಪಿಎಲ್​ನ ಮೊದಲಾರ್ಧದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆರ್​ಸಿಬಿ ತಂಡವು ಮುಂದಿನ ಏಳು ಮ್ಯಾಚ್​ಗಳನ್ನು ಗೆದ್ದುಕೊಂಡರೆ ಒಟ್ಟು 14 ಅಂಕಗಳನ್ನು ಪಡೆದುಕೊಳ್ಳಲಿದೆ. ಈಗಾಗಲೇ 2 ಪಾಯಿಂಟ್ಸ್ ಹೊಂದಿರುವ ಆರ್​ಸಿಬಿ 16 ಅಂಕಗಳನ್ನು ಗಳಿಸಿದರೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ. ಒಂದು ವೇಳೆ ಮುಂದಿನ 7 ಪಂದ್ಯಗಳಲ್ಲಿ ಒಂದು ಮ್ಯಾಚ್ ಸೋತರೂ ಪ್ಲೇಆಫ್ ಪ್ರವೇಶಿಸಲು ನೆಟ್ ರನ್ ರೇಟ್ ಅಥವಾ ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗಿ ಬರಬಹುದು.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 21 ರಂದು ಆಡಲಿದ್ದು, ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ದ್ವಿತೀಯಾರ್ಧದಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ ಆರ್​ಸಿಬಿ.

ಫ್ರೆಶ್ ನ್ಯೂಸ್

Latest Posts

Featured Videos