ತವರು ನೆಲದಲ್ಲಿ ಮೊದಲ ಪಂದ್ಯ ಗೆದ್ದಾ ಆರ್​ಸಿಬಿ

ತವರು ನೆಲದಲ್ಲಿ ಮೊದಲ ಪಂದ್ಯ ಗೆದ್ದಾ ಆರ್​ಸಿಬಿ

ಬೆಂಗಳೂರು: ಐಪಿಎಲ್ 2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಗೆಲುವಿನ ಖಾತೆ ತೆರೆದಿದೆ. ತವರು ನೆಲ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಫಾಫ್ ಪಡೆ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ.

ಐಪಿಎಲ್ 2024ರ 6 ನೆನ್ನೆ ನಡೆದ 6 ನೇ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಆರ್‌ಸಿಬಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು. ತವರು ನೆಲ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಫಾಫ್ ಪಡೆ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ.

ಇದರಂತೆ ಮೊದಲು ಬ್ಯಾಟ್‌ ಮಾಡಿದ ಪಂಜಾಬ್ ಕಿಂಗ್ಸ್ ಪರ ನಾಯಕ ಶಿಖರ್ ಧವನ್ ಮತ್ತು ಜಿತೇಶ್ ಶರ್ಮಾ ಉಪಯುಕ್ತ ಇನ್ನಿಂಗ್ಸ್ ಆಡಿದ್ದರು. ಧವನ್ 37 ಎಸೆತಗಳಲ್ಲಿ 45 ರನ್ ಗಳಿಸಿದರೆ, ಜಿತೇಶ್ 20 ಎಸೆತಗಳಲ್ಲಿ 27 ರನ್ ಗಳಿಸಿದರು. ಅಂತಿಮವಾಗಿ ಶಶಾಂಕ್ ಸಿಂಗ್ 8 ಎಸೆತಗಳಲ್ಲಿ 21 ರನ್ ಗಳಿಸಿದರು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್​ಗೆ ಉತ್ತಮ ಆರಂಭ ಸಿಗಲಿಲ್ಲ. 17 ರನ್‌ಗಳಿಗೆ ತಂಡದ ಮೊದಲ ವಿಕೆಟ್ ಕಳೆದುಕೊಂಡ ನಂತರ ಧವನ್ ಮತ್ತು ಪ್ರಭಾಸಿಮ್ರಾನ್ 38 ಎಸೆತಗಳಲ್ಲಿ 55 ರನ್ ಸೇರಿಸಿದರು. ಆದರೆ ಈ ಅಪಾಯಕಾರಿ ಜೊತೆಯಾಟವನ್ನು ಮ್ಯಾಕ್ಸ್‌ವೆಲ್ ಮುರಿದರು.

ಮುಂದಿನ ಎಸೆತದಲ್ಲಿ ಧವನ್ ವಿಕೆಟ್ ರೂಪದಲ್ಲಿ ಪಂಜಾಬ್​ಗೆ ದೊಡ್ಡ ಪೆಟ್ಟು ಬಿದ್ದಿತು. ಈ ವೇಳೆ ಪಂಜಾಬ್ ಸ್ಕೋರ್ 12.1 ಓವರ್​ಗಳಲ್ಲಿ ನಾಲ್ಕು ವಿಕೆಟ್​ಗೆ 98 ರನ್ ಆಗಿತ್ತು. ಜೋಸೆಫ್ ಅವರ ಕೊನೆಯ ಓವರ್‌ನಲ್ಲಿ ಶಶಾಂಕ್ ಸಿಂಗ್ 20 ರನ್ ಬಾರಿಸಿ ತಂಡವನ್ನು 176 ರನ್​ಗಳ ಗಡಿ ದಾಟಿಸಿದರು. ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ತಲಾ ಎರಡು ವಿಕೆಟ್ ಪಡೆದರು.

179 ರನ್‌ಗಳಿಗೆ ಉತ್ತರವಾಗಿ ಗುರಿ ಬೆನ್ನಟ್ಟಿದ ಆರ್​ಸಿಬಿಗೆ ವಿರಾಟ್ ಕೊಹ್ಲಿ ವೇಗದ ಆರಂಭ ನೀಡಿದರು. ಆದರೆ ಮೊದಲ ಓವರ್​ನಲ್ಲೇ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಬೇಕಿತ್ತು. ಆದರೆ ಮೊದಲ ಸ್ಲಿಪ್​ನಲ್ಲಿದ್ದ ಜಾನಿ ಬೈರ್​ಸ್ಟೋವ್ ಕೊಹ್ಲಿ ಕ್ಯಾಚ್ ಬಿಟ್ಟರು. ಇದರ ಲಾಭ ಪಡೆದ ವಿರಾಟ್ ಕೊಹ್ಲಿ ಅದೇ ಓವರ್​ಲ್ಲಿ ನಾಲ್ಕು ಬೌಂಡರಿಗಳನ್ನು ಹೊಡೆದರು. ಆದರೆ ಇನ್ನೊಂದು ಕಡೆಯಿಂದ ವಿಕೆಟ್‌ಗಳು ಬೀಳುತ್ತಲೇ ಇದ್ದವು. ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ಕ್ಯಾಮರೂನ್ ಗ್ರೀನ್ ತಲಾ 3 ರನ್ ಗಳಿಸಿ ರಬಾಡಗೆ ಬಲಿಯಾದರು. ಆದರೆ ಅವರಿಗೂ ಮುಕ್ತವಾಗಿ ಆಡಲು ಸಾಧ್ಯವಾಗಲಿಲ್ಲ. ಇದೇ ವೇಳೆ ವಿರಾಟ್ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಇದರ ನಂತರ ವಿರಾಟ್ ವೇಗವಾಗಿ ರನ್ ಗಳಿಸಿದರು ಆದರೆ ಅವರಿಗೆ ಬೆಂಬಲ ಸಿಗಲಿಲ್ಲ. ಅನುಜ್ ರಾವತ್ ಕೂಡ ರನ್ ಗಳಿಸಲು ಕಷ್ಟಪಡುತ್ತಿದ್ದರು. ಅಂತಿಮವಾಗಿ ವಿರಾಟ್ ಕೊಹ್ಲಿ 16ನೇ ಓವರ್​ನ ಕೊನೆಯ ಎಸೆತದಲ್ಲಿ ಹರ್ಷಲ್ ಪಟೇಲ್​ಗೆ ಬಲಿಯಾದರು. ತಮ್ಮ ಇನ್ನಿಂಗ್ಸ್​ನಲ್ಲಿ 49 ಎಸೆತಗಳನ್ನು ಎದುರಿಸಿದ ವಿರಾಟ್ 11 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 77 ರನ್ ಗಳಿಸಿದರು. ಆ ನಂತರ ಕೇವಲ ಎರಡು ಎಸೆತಗಳ ಬಳಿಕ ಅನುಜ್ ರಾವತ್ ಕೂಡ ಔಟಾದರು. ಆಗ ಆರ್‌ಸಿಬಿಗೆ 22 ಎಸೆತಗಳಲ್ಲಿ 49 ರನ್‌ಗಳ ಅಗತ್ಯವಿತ್ತು. ಅಂತಿಮವಾಗಿ ದಿನೇಶ್ ಕಾರ್ತಿಕ್ 10 ಎಸೆತಗಳಲ್ಲಿ ಅಜೇಯ 28 ರನ್ ಮತ್ತು ಮಹಿಪಾಲ್ ಲ್ಯಾಮ್ರೋರ್ 8 ಎಸೆತಗಳಲ್ಲಿ 17 ರನ್ ಗಳಿಸಿ ಇನ್ನು 4 ಎಸೆತಗಳು ಬಾಕಿ ಇರುವಂತೆಯೇ ತಂಡಕ್ಕೆ ಜಯ ತಂದುಕೊಟ್ಟರು.

ಫ್ರೆಶ್ ನ್ಯೂಸ್

Latest Posts

Featured Videos