ಈ ಸಲ ಕಪ್‌ RCBದ್ದೇ!

ಈ ಸಲ ಕಪ್‌ RCBದ್ದೇ!

ಬೆಂಗಳೂರು: ಐಪಿಎಲ್‌ ಇತಿಹಾಸದಲ್ಲೇ ಒಂದೂ ಸರಿ ಕಪ್‌ ಗೆಲ್ಲದ ತಂಡಕ್ಕೆ ವಿಶ್ವದ್ಯಾಂತ ಹೆಚ್ಚು ಅಭಿಮಾನಿ ಬಳಗ ಹೊಂದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಪ್ ಗೆಲ್ಲುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕನಸು ಕನಸಾಗಿಯೇ ಉಳಿದಿದೆ. ಕಳೆದ 16 ಸೀಸನ್​ಗಳಲ್ಲಿ 3 ಬಾರಿ ಫೈನಲ್ ಪ್ರವೇಶಿಸಿದರೂ ಆರ್​ಸಿಬಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದೀಗ 17ನೇ ಸೀಸನ್​ ಹೊಸ್ತಿಲಲ್ಲಿದ್ದೇವೆ.

ಇತ್ತ ಐಪಿಎಲ್ ಸೀಸನ್-17 ಆರಂಭಕ್ಕೂ ಮುನ್ನವೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಯಲ್ಲಾಗಿಯೇ ಟ್ರೋಫಿ ಎತ್ತಿ ಹಿಡಿಯಲಿದೆ ಎಂದು ಎಬಿಡಿ ಹೇಳಿದ್ದಾರೆ.

ನಾನಂತು ಸಾಕಷ್ಟು ಆಶಾವಾದಿಯಾಗಿದ್ದೇನೆ. ಈ ಸಲ ಖಂಡಿತವಾಗಿಯೂ ಆರ್​ಸಿಬಿ ತಂಡ ಕಪ್ ಗೆಲ್ಲುವ ವಿಶ್ವಾಸವಿದೆ. ಅದರಂತೆ ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿಗೆ ಕಿರೀಟ ಮುಡಿಗೇರಿಸಿಕೊಳ್ಳಲಿದೆ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos