ಭಾರತೀಯ ಸೇನೆಯಲ್ಲಿ 55 ಹುದ್ದೆಗಳ ನೇಮಕಾತಿ

ಭಾರತೀಯ ಸೇನೆಯಲ್ಲಿ 55 ಹುದ್ದೆಗಳ ನೇಮಕಾತಿ

ಬೆಂಗಳೂರು, ಜ. 14: ಭಾರತೀಯ ಸೇನೆಯು ಎನ್ಸಿಸಿ ವಿಶೇಷ ಪ್ರವೇಶ ಸ್ಕೀಮ್ ಮೂಲಕ ಒಟ್ಟು 55 ಎಸ್ಎಸ್ಸಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆ. 2,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಅಭ್ಯರ್ಥಿಗಳು ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ: ಜುಲೈ 1,2020ರ ಅನ್ವಯ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ( ಅಭ್ಯರ್ಥಿಯು ಜುಲೈ 2,1995ರ ಮುಂಚೆ ಮತ್ತು ಜುಲೈ 1,2001ರ ನಂತರ ಜನಿಸಿರಬಾರದು) ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಭಾರತೀಯ ಸೇನೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 2,50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ http://joinindianarmy.nic.in/Default.aspx?id=5&lg=eng& ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos