ಸಂತ್ರಸ್ತರ ಬ್ಯಾಂಕ್ ಖಾತೆಗೆ ಆರ್ಟಿಜಿಎಸ್ ಮೂಲಕ ಪರಿಹಾರ

ಸಂತ್ರಸ್ತರ ಬ್ಯಾಂಕ್ ಖಾತೆಗೆ ಆರ್ಟಿಜಿಎಸ್ ಮೂಲಕ ಪರಿಹಾರ

ಬೆಂಗಳೂರು, ಅ. 5: ರಾಜ್ಯದಲ್ಲಿ ನೆರೆ ಪರಿಹಾರ ವಿಚಾರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಸಂತ್ರಸ್ತರ ಬ್ಯಾಂಕ್ ಖಾತೆಗೆ ಆರ್ಟಿಜಿಎಸ್ ಮೂಲಕ ಪರಿಹಾರ ವಿತರಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಸ್ಪಂದಿಸಿದ್ದು ಇದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಳೆದ ವರ್ಷ ಕೊಡಗಿನ ಪ್ರವಾಹಪೀಡಿತ ಪ್ರದೇಶದಲ್ಲಿ 97000 ರೂ. ಪರಿಹಾರ ಘೋಷಿಸಿದ್ದರೂ ಈವರೆಗೆ ಹಣ ಬಿಡುಗಡೆಯಾಗಿಲ್ಲ. ಆದರೆ, ನಮ್ಮ ಸರ್ಕಾರ ಈಗಾಗಲೇ ಮನೆ ನಿರ್ಮಾಣಕ್ಕೆ ಮುಂಗಡವಾಗಿ 1 ಲಕ್ಷ ರೂ.ಗಳನ್ನು ಸಂತ್ರಸ್ತರ ಖಾತೆಗೆ ಜಮೆ ಮಾಡಲಾಗಿದೆ. ಹಾಗಾಗಿ ಮಾತನಾಡುವಾಗ ಎಚ್ಚರ ವಹಿಸಬೇಕು ಎಂದು ಹೇಳಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿಖಜಾನೆ ಲೂಟಿಯಾಗಿತ್ತು. ಹಾಗೆಂದು‌ ಯಾರನ್ನೂ ದೂರುವುದಿಲ್ಲ. ಇದೀಗ ಯಡಿಯೂರಪ್ಪ ಅವರು ಖಜಾನೆ ತುಂಬಿಸುವ ಕೆಲಸ ಮಾಡುತ್ತಿದ್ದಾರೆ.

ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸದ ನೋಟೀಸ್ ನೀಡಿರುವ ವಿಚಾರದಲ್ಲಿ ಮಾತನಾಡಿದ ನಳಿನ್, ಪಕ್ಷದ ಶಿಸ್ತು, ನಿಯಮವನ್ನು ಪಾಲಿಸುತ್ತಾ ಸಂಯಮದಿಂದ ವರ್ತಿಸಬೇಕು. ಅದನ್ನು ಮೀರಿದವರ ವಿರುದ್ದ ಕ್ರಮ ಅನಿವಾರ್ಯ ಎಂದು ಪ್ರತಿಕ್ರಿಯಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos