ಡಿಕೆಶಿ ತಾಯಿ ಮತ್ತು ಪತ್ನಿಗೆ ರಿಲೀಫ್

ಡಿಕೆಶಿ ತಾಯಿ ಮತ್ತು ಪತ್ನಿಗೆ ರಿಲೀಫ್

ನವದೆಹಲಿ,ಅ.16 : ಡಿ.ಕೆ.ಶಿವಕುಮಾರ್ ಅವರ ತಾಯಿ ಮತ್ತು ಪತ್ನಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅ.17ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ರವರ ತಾಯಿ ಗೌರಮ್ಮ , ಪತ್ನಿ ಉಷಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ಹೈಕೋರ್ಟ್ನ ತಾತ್ಕಾಲಿಕ ತಡೆಯಿಂದಾಗಿ ಇಬ್ಬರಿಗೂ ರಿಲೀಫ್ ಸಿಕ್ಕಿದ್ದು, ನಾಳೆ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವುದರಿಂದ ವಿನಾಯ್ತಿ ಸಿಕ್ಕಂತಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos