ಮೀಸಲಾತಿ ನಿಗದಿ ಆತುರದ ನಿರ್ಧಾರ!

ಮೀಸಲಾತಿ ನಿಗದಿ ಆತುರದ ನಿರ್ಧಾರ!

ಕಲಬುರಗಿ : ತಾಲೂಕು ಮತ್ತು ಜಿ.ಪಂ ಚುನಾವಣೆಯಲ್ಲಿ ಮೀಸಲಾತಿ ನಿಗದಿಗೆ ಸಂಬAಧಿಸಿದAತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಇದೊಂದು ಆತುರದ ನಿರ್ಧಾರವಾಗಿದೆ. ಜನ ಪ್ರತಿನಿಧಿಯಾಗಿ ಇದು ನನ್ನ ವ್ಯಕ್ತಿಕ ಅಭಿಪ್ರಾಯವೇ ಹೊರತು ಸಚಿವನಾಗಿ ಅಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ ವರೆಗೆ ಚುನಾವಣೆ ಮುಂದೂಡಬೇಕೆಂದು ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಇದ್ದಕ್ಕಿದ್ದಂತೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಮೀಸಲಾತಿ ವಿಭಾಗಗಳನ್ನು ಘೋಷಿಸಲಾಗಿದೆ ಎಂದರು.

ರಾಜ್ಯ ಚುನಾವಣಾ ಆಯೋಗದ ನಡೆಯನ್ನು ಪ್ರಶ್ನಿಸಿದ ಈಶ್ವರಪ್ಪ ಸರ್ಕಾರ ಆಯೋಗದ ಜೊತೆ ಸಹಕಾರದಿಂದ ವರ್ತಿಸುವುದ್ದು, ರಾಜಕೀಯ ಪಕ್ಷವಾಗಿ ಬಿಜೆಪಿ ಚುನಾವಣೆ ಎದುರಿಸಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos