ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಬದ್ಧ

ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಬದ್ಧ

ಬೆಂಗಳೂರು, ಮಾ.7, ನ್ಯೂಸ್ ಎಕ್ಸ್ ಪ್ರೆಸ್: ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರೇಷ್ಮೆ ಬೆಳೆಗಾರರ ಸಮಸ್ಯೆಗಳ ಕುರಿತು  ಕರೆದಿದ್ದ ಸಭೆಯಲ್ಲಿ  ರೇಷ್ಮೆ ಬೆಳೆಗಾರರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ರೇಷ್ಮೆ ನೂಲು ಬಿಚ್ಚಾಣಿಕೆದಾರರು ಮತ್ತು ರೈತರ ಸಮಿತಿ ರಚಿಸುವುದಾಗಿ ತಿಳಿಸಿದರು.

ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಕೂಡಲೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಚೀನಾ ಮಾದರಿಯಲ್ಲಿ, ರಾಜ್ಯದಲ್ಲಿ ರೇಷ್ಮೆ ಉಪ ಉತ್ಪನ್ನಗಳ ತಯಾರಿಕೆಗೆ ಒತ್ತು ನೀಡಿ, ಉತ್ತಮ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಸಹ ಕ್ರಮ ಕೈಗೊಳ್ಳಲಾಗುವುದು ಹಾಗೂ ಮದ್ಯವರ್ತಿಗಳ ಹಾವಳಿಯನ್ನು ಸಹ ತಪ್ಪಿಸಲಾಗುವುದು. ರೇಷ್ಮೆ ಬೆಳೆಗಾರರಿಗೆ  ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದರು. ಶೀಘ್ರದಲ್ಲಿಯೇ ಮತ್ತೊಂದು ಸಭೆ ಕರೆದು ರೇಷ್ಮೆ ಬೆಳೆಗಾರರ ಸಮಸ್ಯೆಗಳ ಪರಿಹಾರದ ಕುರಿತು ವಿವರವಾಗಿ ಚರ್ಚಿಸುವುದಾಗಿ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos